Home ಟಾಪ್ ಸುದ್ದಿಗಳು ಸುಳ್ಳು ಟ್ವೀಟ್: ತೇಜಸ್ವಿ ಸೂರ್ಯ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ

ಸುಳ್ಳು ಟ್ವೀಟ್: ತೇಜಸ್ವಿ ಸೂರ್ಯ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ

ಬೆಂಗಳೂರು: ವಕ್ಫ್ ಆಸ್ತಿ ಅಂತ ಪಹಣಿಯಲ್ಲಿ ನಮೂದಾದ ಹಿನ್ನೆಲೆ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಸುಳ್ಳು ಸುದ್ದಿ ಪೋಸ್ಟ್ ಮಾಡಿದ್ದಾರೆಂಬ ಆರೋಪದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸಿಇಎನ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಗಿತ್ತು. ಇದೀಗ ಈ ಪ್ರಕರಣಕ್ಕೆ ಹೈಕೋರ್ಟ್​ ತಡೆ ನೀಡಿದೆ.

ಪ್ರಕರಣಕ್ಕೆ ತಡೆಕೋರಿ ತೇಜಸ್ವಿ ಸೂರ್ಯ ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಮೃತ ರೈತನ‌ ತಂದೆಯ ಹೇಳಿಕೆ ಆಧರಿಸಿ ಟ್ವೀಟ್ ಮಾಡಲಾಗಿದ್ದು, ಬಳಿಕ ಪೊಲೀಸರ ಸ್ಪಷ್ಟನೆ ನಂತರ ಟ್ವೀಟ್ ಡಿಲೀಟ್ ಮಾಡಲಾಗಿದೆ.

ಹೀಗಾಗಿ ಪ್ರಕರಣಕ್ಕೆ ತಡೆ ನೀಡುವಂತೆ ತೇಜಸ್ವಿ ಸೂರ್ಯ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ದರು. ಇದನ್ನು ಪುರಸ್ಕರಿಸಿದ ಕೋರ್ಟ್, ತೇಜಸ್ವಿ ಸೂರ್ಯ ವಿರುದ್ಧದ ಪ್ರಕರಣಕ್ಕೆ ತಡೆಯಾಜ್ಞೆ ನೀಡಿದೆ.

Join Whatsapp
Exit mobile version