ಖ್ಯಾತ ಮಲಯಾಳಂ ನಟ ಬಾಬುರಾಜ್ ಬಂಧನ

Prasthutha|

ಕೊಚ್ಚಿ: ಖ್ಯಾತ ಮಲಯಾಳಂ ನಟ ಬಾಬುರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಕೇರಳ ಹೈಕೋರ್ಟ್ ನೀಡಿದ ಆದೇಶದ ಮೇರೆಗೆ ಪೊಲೀಸ್ ಠಾಣೆಗೆ ಬಾಬುರಾಜ್ ಶರಣಾಗಿದ್ದಾರೆ ಎಂದು ವರದಿಯಾಗಿದೆ.

- Advertisement -

ಹೈಕೋರ್ಟ್ ನಿರ್ದೇಶನದನ್ವಯ ನಟನನ್ನು ಆದಿಮಾಲಿ ಠಾಣೆಯ ಪೊಲೀಸರು ಬಂಧಿಸಿದ್ದು, ಇಡುಕ್ಕಿಯ ಸ್ಥಳೀಯ ನ್ಯಾಯಾಲಯದಲ್ಲಿ ಅವರನ್ನು ಹಾಜರುಪಡಿಸಿದ ನಂತರ ಜಾಮೀನಿನ ಮೇಲೆ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಕಂದಾಯ ವಸೂಲಾತಿ ಪ್ರಕ್ರಿಯೆಗೆ ಗುರಿಯಾಗಿರುವ ಇಡುಕ್ಕಿಯ ಕಲ್ಲಾರ್‌ನಲ್ಲಿರುವ ತನ್ನ ರೆಸಾರ್ಟ್ ಅನ್ನು ಬಾಬುರಾಜ್ ವ್ಯಕ್ತಿಯೊಬ್ಬರಿಗೆ ಗುತ್ತಿಗೆಗೆ ನೀಡಿದ್ದರು ಎಂಬ ಆರೋಪದಲ್ಲಿ ಹೈಕೋರ್ಟ್ ನಿರ್ದೇಶನ ನೀಡಿದ್ದು, ಈ ಹಿನ್ನೆಲೆಯಲ್ಲಿ ನಟನನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -