ಖ್ಯಾತ ಟಿಕ್ ಟಾಕ್ ಸ್ಟಾರ್ MR. FAISU ಬಂಧನ !

Prasthutha|

ಮುಂಬೈ: ಅತಿವೇಗ, ನಿರ್ಲಕ್ಷ್ಯದಿಂದ ವಾಹನ ಓಡಿಸಿದ ಆರೋಪದ ಮೇಲೆ ಟಿಕ್ ಟಾಕ್ ಸ್ಟಾರ್, ಫೈಸಲ್ ಶೇಖ್ ನನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -


ನವೆಂಬರ್ 3ರಂದು ಮುಂಬೈ ಪೊಲೀಸರು ಅವರನ್ನು ಬಂಧಿಸಿರುವ ಮಾಹಿತಿ ಲಭ್ಯವಾಗಿದೆ.
ಮುಂಬೈ ನ ಮಿಲತ್ ನಗರದ ಓಷಿವರದ ಸಮೀಪ ತಮ್ಮ ಐಷಾರಾಮಿ ಕಾರನ್ನು ಅತಿವೇಗ ಹಾಗೂ ನಿರ್ಲಕ್ಷದಿಂದ ಓಡಿಸಿ ಸಿಕ್ಕಿಹಾಕಿಕೊಂಡಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋಗಳು ವೈರಲ್ ಆಗಿವೆ.

ತಮ್ಮ ಐಷಾರಾಮಿ ಬಿಎಂಡಬ್ಲ್ಯು ಕಾರನ್ನು ಓಷಾವರದ ಸೊಸೈಟಿಗೆ ಡಿಕ್ಕಿಹೊಡೆದ ನಂತರ, ಫೈಸು ಅಲ್ಲಿಂದ ಕಾಲ್ಕಿತ್ತಿದ್ದಾರೆ. ನಂತರ ಪೊಲೀಸರು ಅವರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

- Advertisement -


ಘಟನೆಗೆ ಸಂಬಂಧಪಟ್ಟಂತೆ ಪೊಲೀಸರು ಐಪಿಸಿ ಸೆಕ್ಷನ್ 279 ಹಾಗೂ 336ರ ಅನ್ವಯ ಪ್ರಕರಣವನ್ನು ದಾಖಲಿಸಲಾಗಿದೆ.

Join Whatsapp