ತರಗತಿಯಲ್ಲಿ ಕೂತು ಪಾಠ ಕೇಳುತ್ತಿದ್ದ ವಿದ್ಯಾರ್ಥಿನಿಯ ತಲೆ ಮೇಲೆ ಬಿದ್ದ ಫ್ಯಾನ್..!

Prasthutha|

- Advertisement -

ಮಧ್ಯಪ್ರದೇಶ: ತರಗತಿಯಲ್ಲಿ ಕೂತು ಪಾಠ ಕೇಳುತ್ತಿದ್ದ ವಿದ್ಯಾರ್ಥಿನಿ ತಲೆಯ ಮೇಲೆ ಇದ್ದಕ್ಕಿದ್ದಂತೆ ಫ್ಯಾನ್​​ ಬಿದ್ದಿರುವ ಘಟನೆ ಮಧ್ಯಪ್ರದೇಶದ
ಸೆಹೋರ್ ಜಿಲ್ಲೆಯ ಶಾಲೆಯೊಂದರಲ್ಲಿ ನಡೆದಿದೆ.

ಪರಿಣಾಮ ಬಾಲಕಿಗೆ ಕೈಗೆ ಗಾಯಗಳಾಗಿವೆ. ತಕ್ಷಣ ಬಾಲಕಿಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಇದೀಗ ಬಾಲಕಿ ಬಹುತೇಕ ಚೇತರಿಸಿಕೊಂಡಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.

- Advertisement -

ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದ್ದು, ನೆಟ್ಟಿಗರಿಂದ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶಾಲೆಯ ನಿರ್ಲಕ್ಷ್ಯ ಕಂಡು ಪೋಷಕರು ಶಾಲಾ ಆಡಳಿತ ಮಂಡಳಿಯ ವಿರುದ್ದ ದೂರು ದಾಖಲಿಸಿದ್ದಾರೆ. ಲಕ್ಷ ಲಕ್ಷ ಶುಲ್ಕ ತೆಗೆದುಕೊಂಡರೂ ಈ ರೀತಿಯ ನಿರ್ಲಕ್ಷ್ಯ ಕಂಡು ಬಂದಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.




Join Whatsapp