Home ಟಾಪ್ ಸುದ್ದಿಗಳು ಸಾವಾಗಿಲ್ಲ ಮಾರ್ರೆ ನಿಜ | ಅಭಿಮಾನಿಗಳು ಟ್ರೋಲ್ ಮಾಡೋ ಮುನ್ನ ಸ್ವಲ್ಪ ಸಮಾಧಾನದಿಂದ ವರ್ತಿಸಬೇಕು: ಶಾಸಕಿ...

ಸಾವಾಗಿಲ್ಲ ಮಾರ್ರೆ ನಿಜ | ಅಭಿಮಾನಿಗಳು ಟ್ರೋಲ್ ಮಾಡೋ ಮುನ್ನ ಸ್ವಲ್ಪ ಸಮಾಧಾನದಿಂದ ವರ್ತಿಸಬೇಕು: ಶಾಸಕಿ ನಯನಾ ಮೋಟಮ್ಮ

ಬೆಂಗಳೂರು: ಶಾಸಕ ಪ್ರದೀಪ್ ಈಶ್ವರ್ ವಿಧಾನಸಭಾ ಕಲಾಪದಲ್ಲಿ ನೀಡಿರುವ ಹೇಳಿಕೆ ಭಾರೀ ಟ್ರೋಲ್ ಆಗುತ್ತಿದ್ದು, ಈ ಬಗ್ಗೆ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಸ್ಪಷ್ಟನೆ ನೀಡಿದ್ದಾರೆ.


ಸಾರಿಗೆ ನೌಕರ ಆತ್ಮಹತ್ಯೆಗೆ ಯತ್ನಿಸಿದ್ದ ಪ್ರಕರಣದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ನಡುವೆ ವಾಕ್ಸಮರ ಏರ್ಪಟ್ಟಿತ್ತು. ಈ ವೇಳೆ ಸ್ಪೀಕರ್ ಅವರ ಬಳಿ ಮಾತನಾಡಲು ಅವಕಾಶ ಕೇಳಿದ್ದ ಪ್ರದೀಪ್ ಈಶ್ವರ್, ಒಂದು ಸಾವು ಆಗಿದ್ದಕ್ಕೆ ಹೋರಾಟ ಮಾತನಾಡುತ್ತಿದ್ದಾರೆ. ಕೋವಿಡ್ ಸಮಯದಲ್ಲಿ ಸಾವಿರಾರು ಸಾವು ಆಯಿತು ಅದಕ್ಕೆ ನ್ಯಾಯ ಬೇಡ್ವಾ ಎಂದರು. ಈ ವೇಳೆ ಮಧ್ಯೆ ಪ್ರವೇಶಿಸಿ ಸ್ಪೀಕರ್ ಯು.ಟಿ.ಖಾದರ್, ಸಾವಾಗಿಲ್ಲ ಮಾರ್ರೆ ಎಂದು ತಡೆದರು. ಈ ವೀಡಿಯೋ ಭಾರೀ ಟ್ರೋಲ್ ಆಗುತ್ತಿದ್ದು, ಮೇಜು ತಟ್ಟುವ ಮೂಲಕ ಅವರನ್ನು ಬೆಂಬಲಿಸಿದ್ದ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಕೂಡ ಟ್ರೋಲ್ ಗೆ ಗುರಿಯಾಗಿದ್ದಾರೆ.


ಈ ಬಗ್ಗೆ ವೀಡಿಯೊ ಹಂಚಿಕೊಂಡಿರುವ ಶಾಸಕಿ, ಅಭಿಮಾನಿಗಳು ಟ್ರೋಲ್ ಮಾಡೋ ಮುನ್ನ ಸ್ವಲ್ಪ ಸಮಾಧಾನದಿಂದ ವರ್ತಿಸಬೇಕು. ಪ್ರದೀಪ್ ಈಶ್ವರ್ ಅವರು ಹೇಳಿರೋ ವಿಚಾರದಲ್ಲಿ ಯಾವ ತಪ್ಪು ಇಲ್ಲ. ಮಾಹಿತಿ ಕೊರತೆಯಿದ್ದಿರಬಹುದು ಅಷ್ಟೆ. ಆದರೆ, ಅವರು ಹೇಳಿರುವ ವಿಚಾರ, ಎತ್ತಿರುವ ಪ್ರಶ್ನೆ ಎರಡೂ ಸರಿಯಾಗಿಯೇ ಇದೆ. ಹಾಗಾಗಿಯೇ ನಾನೂ ಸಹ ಅವರ ಮಾತನ್ನು ಬೆಂಬಲಿಸಿದ್ದೇನೆ ಎಂದು ಸ್ಪಷ್ಪಪಡಿಸಿದ್ದಾರೆ.

Join Whatsapp
Exit mobile version