ಫರಂಗಿಪೇಟೆ: ರೆಸ್ಕ್ಯೂ ಚಾರಿಟೆಬಲ್ ಟ್ರಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ

Prasthutha|

- Advertisement -

ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ವಿತರಣೆ ಮತ್ತು ಬಡ ನಿರ್ಗತಿಕ ಕುಟುಂಬಗಳಿಗೆ ಆರೋಗ್ಯ ಕಾರ್ಡ್‌ ವಿತರಣೆ

ಮಂಗಳೂರು: ರೆಸ್ಕ್ಯೂ ಚಾರಿಟೇಬಲ್ ಟ್ರಸ್ಟ್ ಫರಂಗಿಪೇಟೆ ಇದರ 11ನೇ ವಾರ್ಷಿಕೋತ್ಸವದ ಅಂಗವಾಗಿ ಅರ್ಕುಳ ಯಶಸ್ವಿ ಹಾಲ್‌ ನಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಿತು.

- Advertisement -

ಈ ಸಂದರ್ಭದಲ್ಲಿ ಕರ್ನಾಟಕ ವಿಧಾನ ಸಭಾ ಸ್ಪೀಕರ್ ಯು.ಟಿ ಖಾದರ್ ರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸ್ಪೀಕರ್ ಯು.ಟಿ ಖಾದರ್, ರೆಸ್ಕ್ಯೂ ಚಾರಿಟೇಬಲ್ ಟ್ರಸ್ಟ್ ಒಳ್ಳೆ ಸಮಾಜ ಸೇವೆಯನ್ನು ಮಾಡುತ್ತಿದೆ.
ಅತ್ಯುತ್ತಮ ಉತ್ತಮ‌ ಸಾಮಾಜ ನಿರ್ಮಾಣ ಮಾಡಲು ಪ್ರತಿಯೊಬ್ಬರ ಜವಾಬ್ದಾರಿ ಎಂದರು.

ಭವಿಷ್ಯದಲ್ಲಿ ಯಾರು ಕೂಡ ದುಷ್ಟಚಟಕ್ಕೆ ಬಲಿಯಾಗಬಾರದು. ಎಲ್ಲದಕ್ಕೂ ಕಡಿವಾಣ ಹಾಕಬೇಕು ಎಂದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ವಿತರಣೆ ಮತ್ತು ಬಡ ನಿರ್ಗತಿಕ ಕುಟುಂಬಗಳಿಗೆ ಆರೋಗ್ಯ ಕಾರ್ಡ್‌ ವಿತರಣೆ ನೀಡಲಾಯಿತು.

ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅಬ್ದುಲ್ ಜಬ್ಬಾರ್ ಮಾರಿಪಳ್ಳ, ಮಾಜಿ ಸಚಿವ ರಮನಾಥ ರೈ,
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ, ಮಿಥುನ್ ರೈ, ಪ್ರಕಾಶ್ ಶೆಟ್ಟಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.