ಕೇಜ್ರಿವಾಲ್ ಬಗ್ಗೆ ತಿರುಚಿದ ವೀಡಿಯೊ ಹಂಚಿಕೊಂಡ ಸಂಬಿತ್ ವಿರುದ್ಧ ಎಫ್ಐಆರ್ ದಾಖಲಿಸಲು ದೆಹಲಿ ನ್ಯಾಯಾಲಯ ಸೂಚನೆ

Prasthutha: November 25, 2021

ಲಕ್ನೋ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಗೆಗಿನ ತಿರುಚಲಾದ ವೀಡಿಯೊವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಕ್ಕಾಗಿ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ದೆಹಲಿ ನ್ಯಾಯಾಲಯ ಮಂಗಳವಾರ ದೆಹಲಿ ಪೊಲೀಸರಿಗೆ ನಿರ್ದೇಶನ ನೀಡಿದೆ (ಅತಿಶಿ ಮತ್ತು ಸರ್ಕಾರ ಹಾಗೂ ಇನ್ನಿತರರು).

ರೈತರು ಪ್ರತಿರೋಧ ಒಡ್ಡಿದ್ದ ಮೂರು ಕೃಷಿ ಕಾನೂನುಗಳನ್ನು ದೆಹಲಿ ಮುಖ್ಯಮಂತ್ರಿ ಬೆಂಬಲಿಸುತ್ತಿರುವಂತೆ ವೀಡಿಯೊದಲ್ಲಿ ಬಿಂಬಿಸಲಾಗಿತ್ತು. ಮುಖ್ಯಮಂತ್ರಿ ಕೇಜ್ರಿವಾಲ್ ವಿರುದ್ಧ ರೈತರನ್ನು ಪ್ರಚೋದಿಸಲು ಸಂಬಿತ್ ಪಾತ್ರ ಅವರು ಈ ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ ಎಂದು ಆರೋಪಿಸಿ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ ಅತಿಶಿ ಮರ್ಲೆನಾ ಅವರು ಸಲ್ಲಿಸಿದ ದೂರನ್ನು ಆಧರಿಸಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ರಿಷಬ್ ಕುಮಾರ್ ಅವರು ಆದೇಶ ನೀಡಿದರು.

40 ನಿಮಿಷಗಳ ಕಾಲಾವಧಿಯ ವೀಡಿಯೊವನ್ನು ಎಚ್ಚರಿಕೆಯಿಂದ ಪರಿಶೀಲಿಸಿದಾಗ ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗಳಿಗೆ ಬಿಜೆಪಿ ನಾಯಕರು ನೀಡಿದ ಹೇಳಿಕೆಗಳನ್ನು ಉಲ್ಲೇಖಿಸಿ ಕೇಜ್ರಿವಾಲ್‌ ಉತ್ತರಿಸಿದ್ದಾರೆ., ಆದರೆ ಪಾತ್ರಾ ಹಂಚಿಕೊಂಡ 18 ಸೆಕೆಂಡುಗಳ ವೀಡಿಯೊದಲ್ಲಿ ಕೇಜ್ರಿವಾಲ್‌ ಅವರೇ ಕೃಷಿ ಕಾಯಿದೆಯನ್ನು ಬೆಂಬಲಿಸುತ್ತಿರುವಂತೆ ತಿರುಚಲಾಗಿತ್ತು ಎಂಬುದನ್ನು ನ್ಯಾಯಾಲಯ ಗಮನಿಸಿದೆ.

ಸೂಕ್ತ ಸೆಕ್ಷನ್‌ಗಳ ಅಡಿ ಎಫ್‌ಐಆರ್‌ ದಾಖಲಿಸಿಕೊಂಡು ಘಟನೆಯ ಕುರಿತು ತನಿಖೆ ಆರಂಭಿಸಬೇಕು ಎಂದು ಠಾಣಾಧಿಕಾರಿಗೆ ನ್ಯಾಯಾಲಯ ಸೂಚಿಸಿದೆ. ಫೆಬ್ರವರಿ 3, 2022ರೊಳಗೆ ದೆಹಲಿ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಕೈಗೊಂಡ ಕ್ರಮಗಳ ಕುರಿತು ಸ್ಥಿತಿಗತಿ ವರದಿ ಸಲ್ಲಿಸಬೇಕೆಂದು ಅದು ಹೇಳಿದೆ.

(ಕೃಪೆ: ಬಾರ್ ಆ್ಯಂಡ್ ಬೆಂಚ್)

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!