Home ಟಾಪ್ ಸುದ್ದಿಗಳು ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಕೃಷಿ ಸಾಲ ಮನ್ನಾ ಮಾಡಲಾಗುವುದು: ರಾಹುಲ್ ಗಾಂಧಿ

ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಕೃಷಿ ಸಾಲ ಮನ್ನಾ ಮಾಡಲಾಗುವುದು: ರಾಹುಲ್ ಗಾಂಧಿ

ಇಂಡಿಯಾ ಒಕ್ಕೂಟವು ಅಧಿಕಾರಕ್ಕೆ ಬಂದರೆ ಕೃಷಿ ಸಾಲ ಮನ್ನಾ ಮಾಡುತ್ತದೆ ಮತ್ತು ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್ಪಿ) ಕಾನೂನು ಖಾತರಿ ನೀಡುತ್ತದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ.


ಪಕ್ಷದ ಲೂಧಿಯಾನ ಅಭ್ಯರ್ಥಿ ಮತ್ತು ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಪರವಾಗಿ ಲುಧಿಯಾನದ ಮುಲ್ಲನ್ಪುರ್ ದಖಾದಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್, “ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ರದ್ದುಪಡಿಸಲಿದೆ” ಎಂದು ಎಂದು ಆರೋಪಿಸಿದ್ದು, “2024ರ ಲೋಕಸಭೆ ಚುನಾವಣೆಯು ಸಂವಿಧಾನವನ್ನು ಉಳಿಸಲು ನಡೆಯುತ್ತಿರುವ ಚುನಾವಣೆ” ಎಂದರು.

Join Whatsapp
Exit mobile version