Home ಜಾಲತಾಣದಿಂದ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದಾಗ ಸಿಡಿಲು ಬಡಿದು ರೈತ ಮೃತ್ಯು

ಮೊಬೈಲ್‌ನಲ್ಲಿ ಮಾತನಾಡುತ್ತಿದ್ದಾಗ ಸಿಡಿಲು ಬಡಿದು ರೈತ ಮೃತ್ಯು

ಲಖ್ನೋ: ಮೊಬೈಲ್ ನಲ್ಲಿ ಮಾತನಾಡುತ್ತಿದ್ದಾಗ ಸಿಡಿಲು ಬಡಿದು ರೈತನೋರ್ವ ಮೃತಪಟ್ಟ ದಾರುಣ ಘಟನೆ ಉತ್ತರಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದಿದೆ.

ಮೃತ ರೈತನನ್ನು ಶ್ರೀಪಾಲ್(50) ಎಂದು ಗುರುತಿಸಲಾಗಿದೆ. ತನ್ನ ಜಮೀನಿನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಸಿಡಿಲು ಬಡಿದು ರೈತ ಶ್ರೀಪಾಲ್ ಕುಸಿದು ಬಿದ್ದಿದ್ದಾರೆ. ಘಟನೆ ಬಗ್ಗೆ ತಿಳಿದು ಸ್ಥಳಕ್ಕೆ ಕುಟುಂಬಸ್ಥರು ಧಾವಿಸಿ ಬರುವಷ್ಟರಲ್ಲಿ ಶ್ರೀಪಾಲ್ ಮೃತಪಟ್ಟಿದ್ದರು.

ನಂತರ ಪೊಲೀಸರು ಆಗಮಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಮೃತ ರೈತನ ಕುಟುಂಬಕ್ಕೆ ಆರ್ಥಿಕ ನೆರವು ನೀಡುವುದಾಗಿ ಕಂದಾಯ ಇಲಾಖೆ ಅಧಿಕಾರಿಗಳು ಭರವಸೆ ನೀಡಿದ್ದಾರೆ.

ಮಾವಿನ ತೋಟದಲ್ಲಿ ಆಟವಾಡುತ್ತಿದ್ದಾಗ ಸಿಡಿಲು ಬಡಿದು ನಾಲ್ಕು ಮಕ್ಕಳು ದಾರುಣ ಮೃತ್ಯು

ಇನ್ನೊಂದು ಪ್ರತ್ಯೇಕ ಘಟನೆಯಲ್ಲಿ ಮಾವಿನ ತೋಟದಲ್ಲಿ ಆಟವಾಡುತ್ತಿದ್ದಾಗ ಸಿಡಿಲು ಬಡಿದು ನಾಲ್ಕು ಮಕ್ಕಳು ಮೃತರಾಗಿದ್ದಾರೆ.

ಈ ದಾರುಣ ಘಟನೆ ಜಾರ್ಖಂಡ್‌ನ ಸಾಹೀಬ್‌ಗಂಜ್ ಜಿಲ್ಲೆಯ ರಾಧಾನಗರ್ ಪೊಲೀಸ್ ಠಾಣೆ ವ್ಯಾಪ್ತಿಯ ಬಾಬುಟೊಲಾ ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ.

ಘಟನೆಯಲ್ಲಿ ಇನ್ನೊಬ್ಬ ಬಾಲಕ ಗಂಭೀರವಾಗಿ ಗಾಯಗೊಂಡಿದ್ದು ಆತನನ್ನು ಸನಿಹದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸಾಹೀಬಗಂಜ್ ಜಿಲ್ಲೆಯ ಎಸ್‌ಪಿ ಅನುರಂಜನ್ ಕಿಸಪೊಟ್ಟಾ ತಿಳಿಸಿದ್ದಾರೆ.

Join Whatsapp
Exit mobile version