ರೈತ ಮುಖಂಡ ರಾಕೇಶ್ ಸಿಂಗ್ ಟಿಕಾಯತ್ ಮುಖಕ್ಕೆ ಮಸಿ ಬಳಿದು ಹಲ್ಲೆ ನಡೆಸಿದ ದುಷ್ಕರ್ಮಿ !

Prasthutha|

►ಮೋದಿ ಮೋದಿ ಎಂದು ಘೋಷಣೆ ಕೂಗಿ ಕೃತ್ಯ

- Advertisement -

ಬೆಂಗಳೂರು: ರಾಷ್ಟ್ರೀಯ ಕಿಸಾನ್ ಮೋರ್ಚಾ ಅಧ್ಯಕ್ಷ ರಾಕೇಶ್ ಸಿಂಗ್ ಟಿಕಾಯತ್ ಮುಖಕ್ಕೆ ಮಸಿ ಬಳಿದು ಹಲ್ಲೆ ಮಾಡಿದ ಯುವಕನೊಬ್ಬ ಮೋದಿ ಮೋದಿ ಎಂದು ಘೋಷಣೆ ಕೂಗಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಗಾಂಧಿ ಭವನದಲ್ಲಿ ರಾಷ್ಟ್ರೀಯ ಕಿಸಾನ್ ಮೊರ್ಚಾ ಅಧ್ಯಕ್ಷ ರಾಕೇಶ್ ಸಿಂಗ್ ಟಿಕಾಯತ್, ಯುದ್ದವೀರ ಸಿಂಗ್ , ಪ್ರೊಫೆಸರ್ ರವಿ ವರ್ಮಕುಮಾರ್, ಚುಕ್ಕಿ ನಂಜುಂಡಸ್ವಾಮಿ ಅವರು ಜಂಟಿ ಸುದ್ದಿಗೋಷ್ಠಿ ನಡೆಸುತ್ತಿದ್ದಾಗ ಏಕಾಏಕಿ ವೇದಿಕೆಗೆ ನುಗ್ಗಿದ ಯುವಕನೋರ್ವ, ಟಿವಿ ಚಾನಲ್ ಮೈಕ್ ಕಿತ್ತು ರಾಕೇಶ್ ಸಿಂಗ್ ಟಿಕಾಯತ್ ಮೇಲೆ ಹಲ್ಲೆ ನಡೆಸಿ ಮುಖಕ್ಕೆ ಮಸಿ ಎರಚಿ ಮೋದಿ ಮೋದಿ ಎಂದು ಘೋಷಣೆ ಕೂಗಿದ್ದಾನೆ.
ಪತ್ರಕರ್ತರು ತುಂಬಿದ್ದ ಸಭಾಂಗಣದಲ್ಲಿ ಈ ಘಟನೆ ನಡೆದಿದ್ದು, ಇಡೀ ಘಟನಾವಳಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ತಕ್ಷಣ ಎಚ್ಚೆತ್ತುಕೊಂಡ ರೈತರು ದುಷ್ಕರ್ಮಿಯನ್ನು ಹಿಡಿದು ಹಿಗ್ಗಾಮುಗ್ಗ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

- Advertisement -

Join Whatsapp