ನವದೆಹಲಿ: ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಮತ್ತು ಕೇಂದ್ರ ಸರಕಾರದ ಮಧ್ಯೆ ಮಾತುಕತೆಗೆ ವೇದಿಕೆ ಸಿದ್ದವಾಗಿದ್ದು, ರೈತರ ಬೇಡಿಕೆಗಳು ಈಡೇರುವ ಸಾಧ್ಯತೆ ಹೆಚ್ಚಾಗಿದೆ.
ಪಂಜಾಬ್ ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯ ಪ್ರಧಾನ ಕಾರ್ಯದರ್ಶಿ ಸರ್ವನ್ ಸಿಂಗ್ ಪಂಧೇರ್, ರೈತರು ಯಾವುದೇ ಸಂಘರ್ಷವನ್ನ ಬಯಸುವುದಿಲ್ಲ ಎಂದು ಹೇಳಿದ್ದು, ಕೇಂದ್ರ ಸರಕಾರದೊಂದಿಗೆ ನಾಳೆ (ಫೆಬ್ರವರಿ 15) ಸಂಜೆ 5 ಗಂಟೆಗೆ ಸಭೆ ನಡೆಯಲಿದೆ ಎಂದು ಹೇಳಿದ್ದಾರೆ.
ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಕೇಂದ್ರ ಸಚಿವರಾದ ಅರ್ಜುನ್ ಮುಂಡಾ, ಪಿಯೂಷ್ ಗೋಯಲ್ ಮತ್ತು ನಿತ್ಯಾನಂದ ರೈ ಅವರೊಂದಿಗೆ ಸಭೆ ನಡೆಯಲಿದೆ ಎಂದು ಹೇಳಿದ್ದಾರೆ.