ರೈತರ ಪ್ರತಿಭಟನಾ ಸ್ಥಳದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮತ್ತೋರ್ವ ರೈತನ ಮೃತದೇಹ ಪತ್ತೆ!

Prasthutha|

ಹೊಸದಿಲ್ಲಿ: ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ರೈತನೊಬ್ಬನ ಮೃತದೇಹ ಸಿಂಘು ಗಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

- Advertisement -

ಮೃತ ರೈತನನ್ನು ಪಂಜಾಬ್ನ ಅಮ್ರೋಹ್ ಜಿಲ್ಲೆಯ ಗುರುಪ್ರೀತ್ ಸಿಂಗ್ ಎಂದು ಗುರುತಿಸಲಾಗಿದೆ.
ಕುಂಡ್ಲಿ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ವಿಚಾರಣೆ ಆರಂಭಿಸಿದ್ದಾರೆ. ಸಾವಿಗೆ ಕಾರಣವೇನು ಎಂಬುದನ್ನು ಪೊಲೀಸರು ಇನ್ನೂ ಬಹಿರಂಗಪಡಿಸಿಲ್ಲ.

ಗುರುಪ್ರೀತ್ ಸಿಂಗ್ ಭಾರತೀಯ ಕಿಸಾನ್ ಯೂನಿಯನ್ ನ ಜಗಜಿತ್ ಸಿಂಗ್ ದಲ್ಲೆವಾಲ್ ಬಣದೊಂದಿಗೆ ಸಂಬಂಧ ಹೊಂದಿದ್ದರು.

- Advertisement -

ಕಳೆದ ತಿಂಗಳು ಲಖ್ಬೀರ್ ಸಿಂಗ್ ಎಂಬ ಕಾರ್ಮಿಕರೊಬ್ಬರ ಮೃತದೇಹ ಸಿಂಘು ಗಡಿಯಲ್ಲಿನ ಬ್ಯಾರಿಕೇಡ್‌ನಲ್ಲಿ ಕಟ್ಟಿಹಾಕಿದ ಸ್ಥಿತಿಯಲ್ಲಿತ್ತು.

ಕೇಂದ್ರದ ಮೂರು ಕರಾಳ ಕೃಷಿ ಕಾನೂನುಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಮತ್ತು ಕನಿಷ್ಠ ಬೆಂಬಲ ಬೆಲೆಗೆ ಕಾನೂನಾತ್ಮಕ ಖಾತರಿ ನೀಡಬೇಕು ಎಂದು ಒತ್ತಾಯಿಸಿ ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದ ಸಾವಿರಾರು ರೈತರು ಕಳೆದ ವರ್ಷ ನವೆಂಬರ್ 26 ರಿಂದ ಮುಷ್ಕರ ನಡೆಸುತ್ತಿದ್ದಾರೆ.

Join Whatsapp