ರಾಜ್ಯದಲ್ಲೂ ಕೃಷಿ ಕಾಯ್ದೆ ವಾಪಸ್ ಗೆ ಒತ್ತಾಯಿಸಿ ಸುವರ್ಣ ಸೌಧ ಮುತ್ತಿಗೆಗೆ ಯತ್ನಿಸಿದ ರೈತರ ಬಂಧನ

Prasthutha|

ಬೆಳಗಾವಿ: ಕೇಂದ್ರ ಸರ್ಕಾರದ ಮಾದರಿಯಲ್ಲಿಯೇ ವಿವಾದಿತ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ಸುವರ್ಣಸೌಧ ಮುತ್ತಿಗೆಗೆ ಯತ್ನಿಸಿದ ರೈತ ನಾಯಕರನ್ನು ಪೊಲೀಸರು ಬಂಧಿಸಿದರು.

- Advertisement -

ನಗರದಲ್ಲಿಂದು ಹಿರೇಬಾಗೇವಾಡಿ ಗ್ರಾಮದಲ್ಲಿ ಜಮಾವಣೆಗೊಂಡಿದ್ದ ರೈತರು ಸುವರ್ಣಸೌಧದವರೆಗೆ ಪಾದಯಾತ್ರೆಗೆ ಮುಂದಾದ ವೇಳೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಸೇರಿ ನೂರಾರು ರೈತರನ್ನು ಪೊಲೀಸರು ವಶಕ್ಕೆ ಪಡೆದು ಬಸ್ ನಲ್ಲಿ ಕರೆದೊಯ್ದರು.

ಈ ವೇಳೆ ಪೊಲೀಸರು ಹಾಗೂ ರೈತರ ಮಧ್ಯೆ ವಾಗ್ವಾದವೂ ನಡೆಯಿತು.ರೈತರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಘೋಷಣೆ ಕೂಗಿದರು.

- Advertisement -

ಈ ಸಂದರ್ಭದಲ್ಲಿ ಕೋಡಿಹಳ್ಳಿ ಚಂದ್ರಶೇಖರ್, ರಾಜ್ಯ ಸರ್ಕಾರವೂ ತ್ವರಿತಗತಿಯಲ್ಲಿ ವಿವಾದಿತ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು. ಇಲ್ಲದಿದ್ದರೆ ಹೋರಾಟ ಕೈಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

Join Whatsapp