ಬೆಂಗಳೂರು : ಕೃಷಿ ಕಾಯ್ದೆಯ ಶವಯಾತ್ರೆಗೆ ತಡೆ ; ಅನ್ನದಾತರು ಪೊಲೀಸ್ ವಶಕ್ಕೆ

Prasthutha|

ಬೆಂಗಳೂರು: ಕೇಂದ್ರ ಸರಕಾರ ಜಾರಿಗೆ ತಂದಿರುವ 3 ರೈತ ವಿರೋಧಿ ಕೃಷಿ ಕಾಯ್ದೆಯ ವಿರುದ್ಧ ಕಳೆದ 120 ದಿನಗಳಿಂದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅನ್ನದಾತರು ನಡೆಸುತ್ತಿರುವ ಪ್ರತಿಭಟನೆಗೆ ಸರಕಾರ ಕವಡೆ ಕಾಸಿನ ಬೆಲೆ ನೀಡಿದೆ ವಂಚಿಸಿದೆ ಮತ್ತು ಅನ್ನದಾತರ ಬೇಡಿಕೆಯನ್ನು ಪೂರೈಸದೆ ಸರಕಾರ ರೈತರ ಬೆನ್ನುಮೂಳೆ ಮುರಿಯಲು ಹೊರಟಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಇಂದು ಭಾರತ್ ಬಂದ್ ಗೆ ಕರೆ ನೀಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯದ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆಗೆ ಸಂಯುಕ್ತ ಹೋರಾಟ ಕರ್ನಾಟಕವು ಕರೆ ನೀಡಿತ್ತು.

ಇದರ ಭಾಗವಾಗಿ ರೈತರು ಬೆಂಗಳೂರಿನ ಟೌನ್ ಹಾಲ್ ಮುಂಭಾಗ ಕೃಷಿ ಕಾಯ್ದೆಯ ಶವಯಾತ್ರೆಯನ್ನು ನಡೆಸಲು ತೀರ್ಮಾನಿಸಿದ್ದು, ಪ್ರತಿಭಟನೆಗೆ ಆಗಮಿಸಿದ ರೈತರು ಪ್ರತಿಭಟನೆ ನೀಡಲು ಅವಕಾಶ ಕೊಡದೆ ಅನ್ನದಾತರನ್ನು ಪೊಲೀಸರು ವಶಕ್ಕೆ ಪಡೆದುಕೊಳ್ಳುವ ಮೂಲಕ ಯಾವುದೇ ರೀತಿಯ ಪ್ರತಿಭಟನೆ ನಡೆಸಲು ಅವಕಾಶ ಸರಕಾರ ಕಲ್ಪಿಸಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿ ಸರಕಾರದ ವಿರುದ್ಧ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

- Advertisement -