ಪ್ರತ್ಯೇಕ ಕೊಡಗು ರಾಜ್ಯಕ್ಕಾಗಿ ರೈತ ಸಂಘದಿಂದ ಹೋರಾಟ!

Prasthutha|

- Advertisement -

ಮಡಿಕೇರಿ: ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ವಿವಿಧ ಸರ್ಕಾರಗಳು, ರಾಜಕೀಯ ಪಕ್ಷಗಳು ಕೊಡಗಿನ ವಿಚಾರದಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿವೆ. ಹೀಗಾಗಿ ಮುಂದೆ ಕೊಡಗಿನ ಜನತೆ ಜಾತಿ, ಧರ್ಮ, ಮತ ಬೇಧ ಮರೆತು ರಾಜಕೀಯವಾಗಿ ಕೊಡಗು ಪ್ರತ್ಯೇಕ ರಾಜ್ಯಕ್ಕೆ ಹೋರಾಟ ನಡೆಸಬೇಕು ಎಂದು ರೈತ ಸಂಘದ ಕೊಡಗು ಜಿಲ್ಲಾಧ್ಯಕ್ಷ ಕಾಡ್ಯಮಾಡ ಮನುಸೋಮಯ್ಯ ಹೇಳಿದರು.

ಕೊಡಗು ಜಿಲ್ಲೆಯ ಪೋನ್ನಂಪೇಟೆ ತಾಲೂಕಿನ ಗೋಣಿಕೊಪ್ಪಲುವಿನ ಪರಿಮಳ ಮಂಗಳ ವಿಹಾರದಲ್ಲಿ ಆಯೋಜನೆ ಗೊಂಡಿದ್ದ ರೈತ ಸಂಘದ ಮಹಾಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೊಡಗು ಜಿಲ್ಲೆ ಅಭಿವೃದ್ಧಿ ಕಾಣಬೇಕಾದರೆ ಕೊಡಗು ಪ್ರತ್ಯೇಕ ರಾಜ್ಯವಾಗಬೇಕು ಇದರಿಂದ ನಮ್ಮ ಜಿಲ್ಲೆಯ ಏಳಿಗೆ ಸಾಧ್ಯ ಎಂದರು.

- Advertisement -

ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ರೈತ ಸಂಘದ ಸದಸ್ಯರು ಇದನ್ನು ಒಗ್ಗಟ್ಟಾಗಿ ಒಪ್ಪಿಗೆ ಸೂಚಿಸಿ ಮುಂದೆ ಪ್ರತ್ಯೇಕ ರಾಜ್ಯದ ಹೋರಾಟ ಕೈಗೆತ್ತಿಕೊಳ್ಳವುದೇ ಲೇಸು ಎಂದು ಸಹಮತ ವ್ಯಕ್ತಪಡಿಸಿದರು. ಇದೇ ವೇಳೆ ಹಲವು ನಿರ್ಣಯಗಳನ್ನು ಕೈಗೊಳ್ಳಲಾಯಿತು.

Join Whatsapp