Home ಟಾಪ್ ಸುದ್ದಿಗಳು ಅಗ್ನಿಪಥ್ ವಿಚಾರ: ಜೂನ್ 24ಕ್ಕೆ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ರಾಷ್ಟ್ರೀಯ ರೈತ ಸಂಘ ನಿರ್ಧಾರ

ಅಗ್ನಿಪಥ್ ವಿಚಾರ: ಜೂನ್ 24ಕ್ಕೆ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ರಾಷ್ಟ್ರೀಯ ರೈತ ಸಂಘ ನಿರ್ಧಾರ

ನವದೆಹಲಿ: ಕೇಂದ್ರ ಸರ್ಕಾರದ ಸೇನಾ ನೇಮಕಾತಿ ಯೋಜನೆಯಾದ ಅಗ್ನಿಪಥ್ ಅನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾದ ವತಿಯಿಂದ ಜೂನ್ 24 ರಂದು ರಾಷ್ಟ್ರವ್ಯಾಪಿಯಾಗಿ ಪ್ರತಿಭಟನೆ ನಡೆಯಲಿದೆ ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ತಿಳಿಸಿದ್ದಾರೆ.

ಕರ್ನಾಲ್’ನಲ್ಲಿ ನಡೆದ ಎಸ್.ಕೆ.ಎಂ ಸಂಘದ ಸಮನ್ವಯ ಸಮಿತಿ ಸಭೆಯಲ್ಲಿ ಪ್ರತಿಭಟನೆಗೆ ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಈ ಪ್ರತಿಭಟನೆಗೆ ಯುವಕರು, ನಾಗರಿಕ ಸಮಾಜ ಮತ್ತು ರಾಜಕೀಯ ಪಕ್ಷಗಳು ಬೆಂಬಲಿಸುವಂತೆ ಆಗ್ರಹಿಸಿದ್ದಾರೆ.

ಜೂನ್ 24 ರಂದು ಅಗ್ನಿಪಥ್ ಯೋಜನೆಯನ್ನು ವಿರೋಧಿಸಿ ಜೂನ್ 24 ರಂದು ದೇಶದ ಎಲ್ಲಾ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಕಿಸಾನ್ ಮೋರ್ಚಾ ತಿಳಿಸಿದೆ.

Join Whatsapp
Exit mobile version