Home ಟಾಪ್ ಸುದ್ದಿಗಳು ಹರ್ಯಾಣದಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಜಲಫಿರಂಗಿ ಪ್ರಯೋಗಿಸಿದ ಪೊಲೀಸರು !

ಹರ್ಯಾಣದಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಜಲಫಿರಂಗಿ ಪ್ರಯೋಗಿಸಿದ ಪೊಲೀಸರು !

ನವದೆಹಲಿ: ಹರ್ಯಾಣದ ಕರ್ನಲ್ ಸರ್ಕಾರಿ ಕಚೇರಿಗೆ ನುಗ್ಗಲೆತ್ನಿಸಿದ ರೈತರು ಮತ್ತು ಪೊಲೀಸರ ನಡುವೆ ಸಂಘರ್ಷ ನಡೆದು ರೈತರನ್ನು ಚದುರಿಸುವ ನಿಟ್ಟಿನಲ್ಲಿ ಪೊಲೀಸರು ಜಲಫಿರಂಗಿ ಪ್ರಯೋಗಿಸಿದ್ದಾರೆ.

ರೈತರು ಕರ್ನಾಲ್ ಮಂಡಿಯಲ್ಲಿ ಸರ್ಕಾರ ವಿರುದ್ಧ ಆಯೋಜಿಸಿದ್ದ ಮಹಾಪಂಚಾಯತ್ ಹಿನ್ನೆಲೆಯಲ್ಲಿ ಪೊಲೀಸರ ರೈತರ ಪ್ರತಿಭಟನೆಯನ್ನು ವಿಫಲಗೊಳಿಸುವ ಸಲುವಾಗಿ ಬ್ಯಾರಿಕೇಡ್ ಗಳನ್ನು ನಿರ್ಮಿಸಿದ್ದರು. ಆಕ್ರೋಶಿತ ರೈತರು ಯಾವುದೇ ಬೆಲೆ ತೆತ್ತಾದರೂ ಕರ್ನಾಲ್ ಪ್ರವೇಶಿಸಿಯೇ ಸಿದ್ದವೆಂದು ಗುಡುಗಿ ಸರ್ಕಾರಕ್ಕೆ ಸವಾಲೆಸೆದಿದ್ದರು .

ಮಾತ್ರವಲ್ಲದೆ ಸರ್ಕಾರ ರೈತರ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಮಾತುಕತೆಗೆ ಆಗಮಿಸದ ಹಿನ್ನೆಲೆಯಲ್ಲಿ ಸರ್ಕಾರಿ ಕಚೇರಿಗೆ ನುಗ್ಗಲೆತ್ನಿಸಿದೆ. ಈ ನಿಟ್ಟಿನಲ್ಲಿ ಪೊಲೀಸರು ರೈತರ ಮೇಲೆ ಜಲಫಿರಂಗಿ ಪ್ರಯೋಗಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಘಟನೆಗೆ ಸಂಬಂಧಿಸಿದಂತೆ ಭಾರತೀಯ ಕಿಸಾನ್ ಯೂನಿಯನ್ ಮುಖ್ಯಸ್ಥರಾದ ರಾಕೇಶ್ ಟಿಕಾಯತ್, ಸ್ವರಾಜ್ ಇಂಡಿಯಾ ಮುಖ್ಯಸ್ಥ ಯೋಗೇಂದ್ರ ಯಾದವ್ ಸೇರಿದಂತೆ ಹಲವಾರು ರೈತ ಮುಖಂಡರನ್ನು ಬಂಧಿಸಲಾಗಿದೆ. ಈ ಕುರಿತು ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಯೋಗೇಂದ್ರ ರೈತರ ಬಂಧನವನ್ನು ದೃಢಪಡಿಸಿದ್ದಾರೆ.

Join Whatsapp
Exit mobile version