ರೈತರಿಗೆ ಪ್ರತಿಭಟಿಸುವ ಹಕ್ಕಿದೆ, ಆದರೆ ರಸ್ತೆ ತಡೆ ಮಾಡುವಂತಿಲ್ಲ : ಸುಪ್ರೀಂ ಕೋರ್ಟ್

Prasthutha|

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಸರಕಾರದ ನೂತನ ಕೃಷಿ ಕಾನೂನು ವಿರೋಧಿಸಿ 23 ದಿನಗಳಿಂದ ರೈತರು ನಡೆಸುತ್ತಿರುವ ಪ್ರತಿಭಟನೆ ಮುಂದುವರಿಸಬಹುದು, ಆದರೆ ದೆಹಲಿ ಪ್ರವೇಶಕ್ಕೆ ತಡೆಯೊಡ್ಡಬಾರದು ಎಂದು ಸುಪ್ರೀಂ ಕೊರ್ಟ್ ತಿಳಿಸಿದೆ.

“ಒಂದು ಕಾನೂನಿನ ವಿರುದ್ಧ ಹೋರಾಟ ನಡೆಸುವುದು ಮೂಲಭೂತ ಹಕ್ಕು ಎಂಬುದನ್ನು ನಾವು ಸ್ಪಷ್ಟಪಡಿಸುತ್ತಿದ್ದೇವೆ. ಆದರೆ, ಇದು ಯಾರೊಬ್ಬರ ಆಸ್ತಿ ಅಥವಾ ಪ್ರಾಣಕ್ಕೆ ಹಾನಿಯುಂಟು ಮಾಡಬಾರದು” ಎಂದು ಸಿಜೆಐ ಎಸ್.ಎ. ಬೋಬ್ಡೆ ಹೇಳಿದ್ದಾರೆ.

- Advertisement -

ಇತರರ ಹಕ್ಕುಗಳಿಗೆ ಧಕ್ಕೆಯಾಗದಂತೆ ಪ್ರತಿಭಟನೆಯ ಸ್ವರೂಪ ಬದಲಾಯಿಸಿಕೊಳ್ಳಲು ಏನು ಮಾಡಬಹುದು ಎಂದು ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ತಿಳಿಸಲಾಗಿದೆ.

ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ತೆರವುಗೊಳಿಸಬೇಕೆಂದು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯ ವೇಳೆ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

- Advertisement -