ಬೋಸ್ಟನ್: ಲಖಿಂಪುರ ಖೇರಿ ಹಿಂಸಾಚಾರ ಸಂಪೂರ್ಣ ಖಂಡನೀಯ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಈ ಸಂಬಂಧ ಯಾರನ್ನೂ ರಕ್ಷಿಸುವ ಯೋಚನೆ ಸರ್ಕಾರದ ಮುಂದೆ ಇಲ್ಲ. ಭಾರತದ ಇತರ ಭಾಗದಲ್ಲಿ ಇಂತಹದೇ ಪ್ರಕರಣ ಬೆಳಕಿಗೆ ಬಂದಿರುವಾಗ ಉ.ಪ್ರ ಬಿಜೆಪಿ ಸರ್ಕಾರವನ್ನು ಮಾತ್ರ ದೂಷಿಸುವುದು ಸರಿಯಲ್ಲ ಎಂದು ಅವರು ಹೇಳಿದರು.
ಪ್ರಸ್ತುತ ಅಮೆರಿಕ ಪ್ರವಾಸದಲ್ಲಿರುವ ನಿರ್ಮಲಾ ಸೀತಾರಾಮನ್ ಅವರು ಹಾರ್ವರ್ಡ್ ಕೆನಡಿ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲಖಿಂಪುರ ಘಟನೆಯ ಕುರಿತ ಪ್ರಶ್ನೆಗೆ ಈ ಮೇಲಿನಂತೆ ಉತ್ತರಿಸಿದರು.
ಲಖಿಂಪುರ ಘಟನೆಗೆ ಸಂಬಂಧಿಸಿದಂತೆ ಆಶಿಶ್ ಮಿಶ್ರಾ ಅವರನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿತ್ತು.
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ಸರ್ಕಾರ ಅವರೊಂದಿಗೆ ಮಾತುಕತೆಗೆ ಸಿದ್ದವಿದೆ ಎಂದು ಸೀತಾರಾಮನ್ ತಿಳಿಸಿದರು.