ಉತ್ತರ ಪ್ರದೇಶದ ಮುಝಫ್ಫರನಗರದಲ್ಲಿ ರೈತರ ಕಿಸಾನ್ ಮಹಾಪಂಚಾಯತ್: ಲಕ್ಷಾಂತರ ಅನ್ನದಾತರು ಭಾಗಿ

Prasthutha|

ಲಕ್ನೋ: ಕೇಂದ್ರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಉತ್ತರ ಪ್ರದೇಶದ ಮುಝಫ್ಫರನಗರದಲ್ಲಿ ಭಾನುವಾರ ಹಮ್ಮಿಕೊಂಡಿರುವ ಕಿಸಾನ್ ಮಹಾಪಂಚಾಯತ್ ನಲ್ಲಿ ಲಕ್ಷಾಂತರ ರೈತರು ಪಾಲ್ಗೊಂಡು ಕೃಷಿ ಕಾನೂನುಗಳ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -


ಸಂಯುಕ್ತ ಕಿಸಾನ್ ಮೋರ್ಚಾ ನೇತೃತ್ವದಲ್ಲಿ ನಡೆಯುತ್ತಿರುವ ಈ ಪಂಚಾಯತ್ ಗೆ ರೈತರ 300ಕ್ಕೂ ಅಧಿಕ ಸಂಘಟನೆಗಳು ಬೆಂಬಲ ಸೂಚಿಸಿವೆ. ಉತ್ತರ ಪ್ರದೇಶ, ಹರ್ಯಾಣ, ಪಂಜಾಬ್, ಮಹಾರಾಷ್ಟ್ರ, ಕರ್ನಾಟಕ, ಸೇರಿದಂತೆ ಹಲವು ರಾಜ್ಯಗಳ ರೈತರು ಈ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ.


5000ಕ್ಕೂ ಅಧಿಕ ಆಹಾರ ಮಳಿಗೆಗಳ ವ್ಯವಸ್ಥೆ ಮಾಡಲಾಗಿದ್ದು, ಮೊಬೈಲ್ ಕ್ಯಾಂಟೀನ್ ಕೂಡ ಇವೆ. ಸಮಾವೇಶದ ಮೇಲೆ ಹೆಲಿಕಾಪ್ಟರ್ ನಲ್ಲಿ ಬಂದು ಹೂಮಳೆಗೆರೆಯಲು ರಾಷ್ಟ್ರೀಯ ಲೋಕ ದಳ (ಆರ್ ಎಲ್ ಡಿ) ಕೇಳಿದ್ದ ಮನವಿಯನ್ನು ಜಿಲ್ಲಾಡಳಿತ ತಿರಸ್ಕರಿಸಿದೆ. ಭದ್ರತೆಯ ಕಾರಣದಿಂದ ಈ ಬೇಡಿಕೆಯನ್ನು ತಿರಸ್ಕರಿಸಲಾಗಿದೆ ಎಂದು ಸಿಟಿ ಮ್ಯಾಜಿಸ್ಟ್ರೇಟ್ ಅಭಿಷೇಕ್ ಸಿಂಗ್ ತಿಳಿಸಿದ್ದಾರೆ.

- Advertisement -


ಸಮಾವೇಶದ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಈ ಸಮಾವೇಶ ನಡೆಯುತ್ತಿದ್ದು, ಆಡಳಿತರೂಢ ಬಿಜೆಪಿಗೆ ಈ ಸಮಾವೇಶ ಮುಳುವಾಗುವ ಸಾಧ್ಯತೆ ಇದೆ.

Join Whatsapp