ತೃಣಮೂಲ ಕಾಂಗ್ರೆಸ್ ಗೆ ಬಹಿರಂಗ ಬೆಂಬಲ ಘೋಷಿಸಿದ ರೈತ ನಾಯಕ ರಾಕೇಶ್ ಟಿಕಾಯತ್

Prasthutha|

ಹೊಸದಿಲ್ಲಿ : ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನಾಯಕ ರಾಕೇಶ್ ಟಿಕಾಯತ್ ಅವರು ತೃಣಮೂಲ ಕಾಂಗ್ರೆಸ್ ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಪಶ್ಚಿಮ ಬಂಗಾಲಕ್ಕೆ ಭೇಟಿ ನೀಡಿದ ರೈತ ನಾಯಕ ಟಿಕಾಯತ್ ನಂದಿಗ್ರಾಮ ಮತ್ತು ಕೊಲ್ಕತಾದಲ್ಲಿ ಬೃಹತ್ ‘ಮಹಾಪಂಚಾಯತ್’ಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

- Advertisement -

ಮೂಲಗಳ ಪ್ರಕಾರ ರಾಕೇಶ್ ಟಿಕಾಯತ್ ಅವರು ನಂದಿಗ್ರಾಮದಿಂದ ಬಿಜೆಪಿ ವಿರುದ್ಧ ಪ್ರಚಾರ ನಡೆಸಲಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಭಾರತೀಯ ಕಿಸಾನ್ ಯೂನಿಯನ್ ನಾಯಕ ‘ಬಿಜೆಪಿಗೆ ಮತ ಹಾಕದಂತೆ ರೈತರಿಗೆ ಮನವಿ ಮಾಡುತ್ತೇನೆ’ ಎಂದು ಹೇಳಿದ್ದಾರೆ.

ಮಮತಾ ಬ್ಯಾನರ್ಜಿ ಅವರು ರೈತರ ಹೋರಾಟಕ್ಕೆ ಬಹಿರಂಗವಾಗಿ ಬೆಂಬಲ ನೀಡಿದ್ದರು. ಇತ್ತೀಚೆಗೆ ನಂದಿಗ್ರಾಮದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ ಟಿಕಾಯತ್ ಅವರು ತನಿಖೆಗೆ ಆಗ್ರಹಿಸಿದ್ದರು.

ಪಶ್ಚಿಮ ಬಂಗಾಳದಲ್ಲಿ 8 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 27ರಿಂದ ಏಪ್ರಿಲ್ 29ರಂದು ಅಂತಿಮ ಹಂತದ ಮತದಾನ ನಡೆಯಲಿದೆ. ಇನ್ನು ಮೇ 2ರಂದು ಮತ ಎಣಿಕೆ ನಡೆಯಲಿದೆ.

- Advertisement -