ಕೃಷಿ ಸಚಿವೆ ಶೋಭಾ ಕರಂದ್ಲಾಜೆಗೆ ರೈತರ ಪ್ರತಿಭಟನೆಯ ಬಿಸಿ

Prasthutha|

ಮೈಸೂರು : ಇತ್ತೀಚ್ಚೆಗಷ್ಟೆ ಕೇಂದ್ರ ಸಚಿವ ಸಂಪುಟಕ್ಕೆ ಆಯ್ಕೆಗೊಂಡ ನೂತನ ಸಚಿವರನ್ನು ಜನತೆಗೆ ಪರಿಚಯಿಸುವ ಕಾರ್ಯಕ್ರಮ ಎನ್ನಲಾದ ಜನಾಶೀರ್ವಾದ ಕಾರ್ಯಕ್ರಮಕ್ಕೆ ಆಗಮಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ವಿರುದ್ಧ ಮೈಸೂರಿನಲ್ಲಿ ರೈತರು ಪ್ರತಿಭಟನೆ ನಡೆಸಿದರು.

- Advertisement -

ನಗರದ ಖಾಸಗಿ ಹೋಟೆಲ್ ನಲ್ಲಿ ಮಂಗಳವಾರ ಜನಾಶೀರ್ವಾದ ಸಂಬಂಧ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಸಭೆ ನಡೆಸುತ್ತಿದ್ದ ಸ್ಥಳಕ್ಕೆ ಆಗಮಿಸಿದ ರಾಜ್ಯ ಕಬ್ಬು ಬೆಳೆಗಾರರ ಸಂಘದ ಮುಖಂಡರುಗಳು ರೈತರ ಆದಾಯ ದ್ವಿಗುಣ ಮಾಡುವುದಾಗಿ ಹೇಳಿ ಕೇಂದ್ರ ಸರ್ಕಾರ ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.
ಇದೇ ವೇಳೆ ಸಚಿವೆ ಶೋಭಾ ಕರಂದ್ಲಾಜೆಗೆ ಮುತ್ತಿಗೆ ಹಾಕಿದ ರೈತರು, ಕೇಂದ್ರ ಸರ್ಕಾರ ಜಾರಿಗೆ ತಂದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಕಳೆದ ಕೆಲವು ತಿಂಗಳಿನಿಂದ ಪ್ರತಿಭಟನೆ ನಡೆಸಿದ್ದಾರೆ. ಕೇಂದ್ರ ಸರ್ಕಾರ ಜಾರಿಗೆ ತಂದ ಎಲ್ಲಾ ಕಾಯ್ದೆಗಳು ರೈತರಿಗೆ ಮಾರಕವಾಗಿವೆ. ತಾವು ಸರ್ಕಾರದ ಪ್ರತಿನಿಧಿಯಾಗಿ ಬಂದಿದ್ದೀರಿ, ನೀವು ದೆಹಲಿಯಲ್ಲಿ ಹೋರಾಟ ಮಾಡುತ್ತಿರುವವರು ರೈತರಲ್ಲ, ದಳ್ಳಾಳಿಗಳು ಹೋರಾಟ ಮಾಡುತ್ತಿದ್ದಾರೆ ಎಂದು ಹೇಳಿದ್ದೀರಿ, ರಾಜಕೀಯ ಪ್ರೇರಿತ ಎಂದು ಹೇಳಿದ್ದೀರಿ, ನಾವು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದ್ದರೆ ಯಾವ ರಾಜಕೀಯ ಪಕ್ಷದಿಂದ ಈ ಕೆಲಸ ಮಾಡುತ್ತಿದ್ದೇವೆಂದು ಬಹಿರಂಗಪಡಿಸಿ ಎಂದು ಆಗ್ರಹಿಸಿದರು.

Join Whatsapp