ರೈತರ ಪ್ರತಿಭಟನೆಗೆ ಆರು ತಿಂಗಳು | ಕೃಷಿ ಕಾಯ್ದೆ ಹಿಂಪಡೆಯಲು ಒತ್ತಾಯಿಸಿ ಇಂದು ʼಕರಾಳ ದಿನʼ

Prasthutha|

ನವದೆಹಲಿ : ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಆರು ತಿಂಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ಇಂದು ʼಕರಾಳ ದಿನʼ ಆಚರಿಸಲು ನಿರ್ಧರಿಸಲಾಗಿದೆ.

ಆರು ತಿಂಗಳು ಕಳೆದರೂ ಸರಕಾರ ತಮ್ಮ ಬೇಡಿಕೆಗಳಿಗೆ ಸ್ಪಂದಿಸದ ಹಿನ್ನೆಲೆಯಲ್ಲಿ ರೈತರು ʼಕರಾಳ ದಿನʼ ಆಚರಿಸಲು ನಿರ್ಧರಿಸಿದ್ದಾರೆ. ಆ ಪ್ರಯುಕ್ತ ಸರಕಾರದ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಸಲು ಸಂಯುಕ್ತ ಕಿಸಾನ್‌ ಮೋರ್ಚಾ ಕರೆ ನೀಡಿದೆ.

- Advertisement -

ದೆಹಲಿ ಗಡಿ ಪ್ರದೇಶಗಳಾದ ಟಿಕ್ರಿ, ಸಿಂಘು, ಗಾಜಿಪುರ ಗಡಿಗಳಲ್ಲಿ ದೊಡ್ಡ ಸಂಖ್ಯೆಯ ರೈತರು ನೆರೆದಿದ್ದಾರೆ. ರೈತರ ಪ್ರತಿಭಟನೆಗೆ ಹತ್ತಕ್ಕೂ ಹೆಚ್ಚು ರಾಜಕೀಯ ಪಕ್ಷಗಳು ಬೆಂಬಲ ಘೋಷಿಸಿವೆ.

ಕೇಂದ್ರದ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ರೈತರು ಪಟ್ಟು ಹಿಡಿದಿದ್ದಾರೆ. ಕೋವಿಡ್‌ ಸಂಕಟದ ನಡುವೆಯೂ ರೈತರ ಪ್ರತಿಭಟನೆ ಮುಂದುವರಿದಿದೆ.

- Advertisement -