ರೈತರ ಪ್ರತಿಭಟನೆ | ಅಮಿತ್ ಶಾ ಮಾತುಕತೆ ವಿಫಲ ; ಅನಿಶ್ಚಿತತೆಯಲ್ಲಿ ಇಂದಿನ ಸಭೆ

Prasthutha|

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಸರಕಾರದ ನೂತನ ಕೃಷಿ ಮಸೂದೆಗಳನ್ನು ಹಿಂಪಡೆಯಲು ಒತ್ತಾಯಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ, ಮಂಗಳವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆಗೆ ನಡೆದ ಆರನೇ ಸುತ್ತಿನ ಮಾತುಕತೆಯೂ ವಿಫಲವಾಗಿದೆ. ಮಸೂದೆಯಲ್ಲಿ ತಿದ್ದುಪಡಿ ತರುವ ಕುರಿತ ಸರಕಾರದ ಪ್ರಸ್ತಾಪವನ್ನು ರೈತರು ತಿರಸ್ಕರಿಸಿದ್ದಾರೆ. ಇಂದು ಮತ್ತೊಂದು ಸುತ್ತಿನ ಮಾತುಕತೆ ನಡೆಯಲಿದ್ದು, ಇದೂ ಅನಿಶ್ಚಿತತೆಯಲ್ಲಿದೆ.  

- Advertisement -

ನಿನ್ನೆ ರೈತರಿಂದ ಭಾರತ ಬಂದ್ ಗೆ ಕರೆ ಕೊಡಲಾಗಿತ್ತು. ಅದರಂತೆ ಹಲವು ರಾಜ್ಯಗಳಲ್ಲಿ ಬಂದ್ ಯಶಸ್ವಿಯಾಗಿತ್ತು. ಈ ನಡುವೆ. ನಿನ್ನೆ ಅಮಿತ್ ಶಾ ಜೊತೆಗೆ ಮಾತುಕತೆಗೆ ಬರುವುದಿಲ್ಲ ಎಂದು ರೈತರು ಹೇಳಿದ್ದರು. ಆದರೆ, ಕೊನೆಗೆ ರಾತ್ರಿ ಅಮಿತ್ ಶಾ ಮತ್ತು ರೈತ ಮುಖಂಡರ ನಡುವೆ ಸಭೆ ನಡೆಯಿತು. ಸಭೆ ಮುಗಿಯುವ ಹೊತ್ತಿಗೆ ಮಧ್ಯರಾತ್ರಿಯಾಗಿತ್ತು.

ಸರ್ಕಾರ ಕಾಯ್ದೆಗೆ ತಿದ್ದುಪಡಿ ಮಾಡಲುದ್ದೇಶಿಸಿರುವುದನ್ನು ಇಂದು ಲಿಖಿತ ರೂಪದಲ್ಲಿ ನೀಡಲಾಗುತ್ತದೆ ಎನ್ನಲಾಗಿದೆ. ಈ ಲಿಖಿತ ತಿದ್ದುಪಡಿಯಲ್ಲಿರುವ ಅಂಶಗಳನ್ನು ಗಮನಿಸಿಕೊಂಡು ಇಂದಿನ ಸಭೆಯಲ್ಲಿ ಭಾಗವಹಿಸಬೇಕೇ ಬೇಡವೇ ಎಂದು ನಿರ್ಧರಿಸಲಾಗುವುದು ಎಂದು ರೈತ ಮುಖಂಡರು ಹೇಳಿದ್ದಾರೆ.

- Advertisement -

ನಮಗೆ ತಿದ್ದುಪಡಿ ಬೇಕಾಗಿಲ್ಲ. ಸಂಪೂರ್ಣ ಕಾನೂನು ಹಿಂಪಡೆಯಬೇಕು. ಇದಕ್ಕಿಂತ ಬೇರೆ ಮಾರ್ಗವಿಲ್ಲ ಎಂದು ರೈತ ಮುಖಂಡರೊಬ್ಬರು ತಿಳಿಸಿದ್ದಾರೆ.



Join Whatsapp