ಮೋದಿ ಸರಕಾರದ ಕೃಷಿ ಕಾನೂನುಗಳ ವಿರುದ್ಧ ಕೇರಳ ಸರಕಾರದಿಂದ ನಿರ್ಣಯ ಮಂಡನೆ

Prasthutha|

ತಿರುವನಂತಪುರಂ : ಪ್ರಧಾನಿ ನರೇಂದ್ರ ಮೋದಿ ಸರಕಾರ ಜಾರಿಗೆ ತಂದಿರುವ ಮೂರು ವಿವಾದಾತ್ಮಕ ಕೃಷಿ ಕಾನೂನಿಗಳಿಗೆ ವಿರುದ್ಧವಾಗಿ ಕೇರಳ ಸರಕಾರ ನಿರ್ಣಯ ಮಂಡಿಸಿದೆ. ಕಳೆದ ಒಂದು ತಿಂಗಳಿನಿಂದ ಕೊರೆವ ಚಳಿಯನ್ನೂ ಲೆಕ್ಕಿಸದೆ ರೈತರು ಪ್ರತಿಭಟನೆ ನಡೆಸಲು ಕಾರಣವಾದ ಈ ಕಾನೂನುಗಳನ್ನು ತಮ್ಮ ರಾಜ್ಯದಲ್ಲಿ ಜಾರಿಗೊಳಿಸದಿರಲು ನಿರ್ಧರಿಸಲಾಗಿದೆ.

- Advertisement -

ಕೇರಳ ವಿಧಾನಸಭೆಯಲ್ಲಿ ಈ ಕುರಿತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನಿರ್ಣಯ ಮಂಡಿಸಿದ್ದಾರೆ. ರೈತರ ಸಮಸ್ಯೆಗಳನ್ನು ಚರ್ಚಿಸಲು ಮತ್ತು ಅವರಿಗೆ ಬೆಂಬಲ ವ್ಯಕ್ತಪಡಿಸುವ ಸಲುವಾಗಿ ಕರೆಯಲಾದ ವಿಶೇಷ ಅಧಿವೇಶನದಲ್ಲಿ ಈ ನಿರ್ಣಯ ಅಂಗೀಕರಿಸಲಾಯಿತು.

ಹೊಸ ಕಾನೂನುಗಳನ್ನು ತಕ್ಷಣವೇ ರದ್ದುಪಡಿಸುವಂತೆ ವಿಜಯನ್ ನಿರ್ಣಯ ಮಂಡಿಸಿದರು.



Join Whatsapp