4ನೇ ದಿನವೂ ಮುಂದುವರೆದ ರೈತರ ಪ್ರತಿಭಟನೆ: 54 ರೈಲುಗಳ ಸಂಚಾರ ರದ್ದು

Prasthutha|

ಅಂಬಾಲಾ: ಪಂಜಾಬ್‌ನ ಪಟಿಯಾಲಾ ಜಿಲ್ಲೆಯ ಶಂಭು ರೈಲ್ವೆ ನಿಲ್ದಾಣದಲ್ಲಿ ರೈತರ ಪ್ರತಿಭಟನೆ ಮುಂದುವರೆದಿದ್ದು, ನಾಲ್ಕನೇ ದಿನವೂ ರೈತರು ಹಳಿಗಳ ಮೇಲೆ ಕುಳಿತು ಪ್ರತಿಭಟನೆ ನಡೆಸಿದ್ದರಿಂದ ಅಂಬಾಲಾ-ಅಮೃತಸರ ಮಾರ್ಗದಲ್ಲಿ ಸಂಚರಿಸುವ 54 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ಹರಿಯಾಣ ಪೊಲೀಸರು ಬಂಧಿಸಿರುವ ಮೂವರು ರೈತರನ್ನು ಬಿಡುಗಡೆಗೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯ ರಹಿತ) ಹಾಗೂ ಕಿಸಾನ್ ಮಜ್ದೂರ್ ಮೋರ್ಚಾದ ನೇತೃತ್ವದಲ್ಲಿ ಬುಧವಾರದಿಂದ ರೈತರ ಪ್ರತಿಭಟನೆ ನಡೆಯುತ್ತಿದೆ.ಪ್ರತಿಭಟನೆಯಿಂದ ಕಳೆದ ಮೂರು ದಿನಗಳಲ್ಲಿ 380 ರೈಲುಗಳ ಸಂಚಾರಕ್ಕೆ ಅಡ್ಡಿಯಾಗಿದ್ದು ಎಂದು ಹೇಳಲಾಗಿದೆ.

ಮೂವರು ರೈತರನ್ನು ಬಿಡುಗಡೆ ಮಾಡುವ ತನಕ ಪ್ರತಿಭಟನೆ ಮುಂದುವರಿಯಲಿದೆ ಎಂದು ರೈತ ಮುಖಂಡ ಸರವಣ ಸಿಂಗ್ ಪಂಢೇರ ಹೇಳಿದ್ದಾರೆ.

- Advertisement -


Join Whatsapp