Home ಟಾಪ್ ಸುದ್ದಿಗಳು ರಾಜ್ಯದಲ್ಲೂ ಕೃಷಿ ಕಾಯ್ದೆ ವಾಪಸ್ ಗೆ ಒತ್ತಾಯಿಸಿ ಸುವರ್ಣ ಸೌಧ ಮುತ್ತಿಗೆಗೆ ಯತ್ನಿಸಿದ ರೈತರ ಬಂಧನ

ರಾಜ್ಯದಲ್ಲೂ ಕೃಷಿ ಕಾಯ್ದೆ ವಾಪಸ್ ಗೆ ಒತ್ತಾಯಿಸಿ ಸುವರ್ಣ ಸೌಧ ಮುತ್ತಿಗೆಗೆ ಯತ್ನಿಸಿದ ರೈತರ ಬಂಧನ

ಬೆಳಗಾವಿ: ಕೇಂದ್ರ ಸರ್ಕಾರದ ಮಾದರಿಯಲ್ಲಿಯೇ ವಿವಾದಿತ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ಸುವರ್ಣಸೌಧ ಮುತ್ತಿಗೆಗೆ ಯತ್ನಿಸಿದ ರೈತ ನಾಯಕರನ್ನು ಪೊಲೀಸರು ಬಂಧಿಸಿದರು.

ನಗರದಲ್ಲಿಂದು ಹಿರೇಬಾಗೇವಾಡಿ ಗ್ರಾಮದಲ್ಲಿ ಜಮಾವಣೆಗೊಂಡಿದ್ದ ರೈತರು ಸುವರ್ಣಸೌಧದವರೆಗೆ ಪಾದಯಾತ್ರೆಗೆ ಮುಂದಾದ ವೇಳೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಸೇರಿ ನೂರಾರು ರೈತರನ್ನು ಪೊಲೀಸರು ವಶಕ್ಕೆ ಪಡೆದು ಬಸ್ ನಲ್ಲಿ ಕರೆದೊಯ್ದರು.

ಈ ವೇಳೆ ಪೊಲೀಸರು ಹಾಗೂ ರೈತರ ಮಧ್ಯೆ ವಾಗ್ವಾದವೂ ನಡೆಯಿತು.ರೈತರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಕೋಡಿಹಳ್ಳಿ ಚಂದ್ರಶೇಖರ್, ರಾಜ್ಯ ಸರ್ಕಾರವೂ ತ್ವರಿತಗತಿಯಲ್ಲಿ ವಿವಾದಿತ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು. ಇಲ್ಲದಿದ್ದರೆ ಹೋರಾಟ ಕೈಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

Join Whatsapp
Exit mobile version