ಇಂದು ರೈತರ ರಸ್ತೆ ತಡೆ ಪ್ರತಿಭಟನೆ | ದೆಹಲಿಯಲ್ಲಿ 50,000 ಭದ್ರತಾ ಸಿಬ್ಬಂದಿ ನಿಯೋಜನೆ

Prasthutha|

ನವದೆಹಲಿ : ವಿವಾದಿತ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯ ಭಾಗವಾಗಿ, ಇಂದು ದೇಶಾದ್ಯಂತ ಹೆದ್ದಾರಿ ತಡೆಗೆ ಕರೆ ಕೊಡಲಾಗಿದೆ. ಆದರೆ, ದೆಹಲಿಯಲ್ಲಿ ಯಾವುದೇ ಪ್ರತಿಭಟನೆಗೆ ಕರೆಕೊಡದಿದ್ದರೂ, ಗಣರಾಜ್ಯೋತ್ಸವ ದಿನಾಚರಣೆಯ ಹಿಂಸಾಚಾರವನ್ನು ಆಧಾರವಾಗಿಟ್ಟುಕೊಂಡು, ಇಂದು ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಸುಮಾರು 50,000 ಭದ್ರತಾ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ.

- Advertisement -

ಎಲ್ಲಾ ತುರ್ತು ಹಾಗೂ ಅಗತ್ಯ ಸೇವೆಗಳಿಗೆ ವಿನಾಯ್ತಿ ನೀಡಲಾಗಿದ್ದು, ಈ ಪ್ರತಿಭಟನೆ ಸಂಪೂರ್ಣ ಅಹಿಂಸಾತ್ಮಕ ಹಾಗೂ ಶಾಂತಿಯುತವಾಗಿರುತ್ತವೆ ಎಂದು ರೈತ ಮುಖಂಡರು ತಿಳಿಸಿದ್ದಾರೆ. ಆದರೆ, ಗಣರಾಜ್ಯೋತ್ಸವ ದಿನದ ಅಹಿತಕರ ಘಟನೆ ಮರುಕಳಿಸದಂತೆ ಪೊಲೀಸರು ಬಿಗಿಭದ್ರತೆ ಆಯೋಜಿಸಿದ್ದಾರೆ.

ದೆಹಲಿ ಪೊಲೀಸರು, ರಿಸರ್ವ್ ಪೊಲೀಸ್, ಅರೆ ಮಿಲಿಟರಿ ಪಡೆ ಸಿಬ್ಬಂದಿಯನ್ನು ಗಡಿ ಸೇರಿದಂತೆ ಆಯಕಟ್ಟಿನ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ. ಐಟಿಬಿಪಿ, ಸಿಆರ್ ಪಿಎಫ್, ಆರ್ ಎಎಫ್ ಸಿಬ್ಬಂದಿ ಕೂಡ ಭದ್ರತೆಗೆ ನಿಯೋಜಿಸಲ್ಪಟ್ಟಿದ್ದಾರೆ.

- Advertisement -

ದೆಹಲಿಯ ವಿವಿಧೆಡೆ ಬಾಂಬ್ ಹಾಗೂ ಶ್ವಾನದಳವನ್ನು ನಿಯೋಜಿಸಲಾಗಿದೆ. ಮಾರುಕಟ್ಟೆ, ಧಾರ್ಮಿಕ ಶ್ರದ್ಧಾ ಕೇಂದ್ರಗಳು ಹಾಗೂ ಐತಿಹಾಸಿಕ ಮಹತ್ವದ ಸ್ಥಳಗಳಾದ ಕೆಂಪುಕೋಟೆ, ಇಂಡಿಯಾ ಗೇಟ್ ಮತ್ತು ಸಂಸತ್ ಭವನ ರಸ್ತೆಗಳ ಮೇಲೆ ಹೆಚ್ಚಿನ ಕಣ್ಗಾವಲು ಇಡಲಾಗಿದೆ. ಸಾವಿರಾರು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ, ಅದನ್ನು ನಿಯಂತ್ರಣ ಕೊಠಡಿಗಳಿಂದ ವೀಕ್ಷಿಸಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ.

Join Whatsapp