ರೈತರ ಪ್ರತಿಭಟನೆ | ಸರಕಾರ, ಕೃಷಿಕರ ವಿವಾದ ಕೊನೆಗೊಳಿಸಲು ಸಮಿತಿ ರಚನೆಯ ಪ್ರಸ್ತಾಪ ಮುಂದಿಟ್ಟ ಸುಪ್ರೀಂ ಕೋರ್ಟ್

Prasthutha|

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಸರಕಾರದ ನೂತನ ಕೃಷಿ ನೀತಿ ವಿರೋಧಿಸಿ ದೆಹಲಿ ಗಡಿಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವುದಕ್ಕೆ ಸಂಬಂಧಿಸಿದ ಪ್ರಕರಣವೊಂದರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ವಿಷಯ ಇತ್ಯರ್ಥಕ್ಕೆ ಸರಕಾರಿ ಅಧಿಕಾರಿಗಳು, ರೈತ ಸಂಘಗಳ ಮುಖಂಡರು ಮತ್ತು ಇತರರನ್ನೊಳಗೊಂಡ ಸಮಿತಿ ರಚಿಸಲು ನಿರ್ಧರಿಸಿದೆ.

- Advertisement -

ಸುಪ್ರೀಂ ಕೋರ್ಟ್ ಸಿಜೆಐ ಎಸ್.ಎ. ಬೋಬ್ಡೆ ನ್ಯಾ. ಎ.ಎಸ್. ಬೋಪಣ್ಣ ಮತ್ತು ವಿ. ರಾಮಸುಬ್ರಮಣಿಯನ್ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ರೈತರೊಂದಿಗಿನ ಕೇಂದ್ರದ ಮಾತುಕತೆ ವಿಫಲವಾಗಿದೆಯಲ್ಲ ಎಂದು ಕೋರ್ಟ್ ಸಾಲಿಸಿಟರ್ ಜನರಲ್ ತುಶಾರ್ ಮೆಹ್ತಾರನ್ನು ಪ್ರಶ್ನಿಸಿದೆ.

ರೈತರಿಗೂ ಈ ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ಅವಕಾಶ ನೀಡಿದ ಕೋರ್ಟ್, ಪ್ರಕರಣದ ವಿಚಾರಣೆ ನಾಳೆಗೆ ಮುಂದೂಡಿದೆ.



Join Whatsapp