ಬೆಳಗಾವಿ | ಅಮಿತ್ ಶಾ ವಿರುದ್ಧ ಪ್ರತಿಭಟನೆ; ರೈತ ಮುಖಂಡರು ಪೊಲೀಸ್ ವಶಕ್ಕೆ

Prasthutha|

ಬೆಳಗಾವಿ : ಕೇಂದ್ರ ಸಚಿವ ಅಮಿತ್ ಶಾ ಭೇಟಿ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಕೇಂದ್ರದ ಕೃಷಿ ಕಾನೂನು ವಿರೋಧಿಸಿ ರೈತರು ಪ್ರತಿಭಟನೆ ನಡೆಸಿದ್ದಾರೆ. ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದರೂ, ಸ್ಪಂದನೆ ನೀಡದ ಕೇಂದ್ರ ಸರಕಾರದ ಕ್ರಮವನ್ನು ಖಂಡಿಸಿ ಪ್ರತಿಭಟನೆ ನಡೆದಿದೆ. ಪ್ರತಿಭಟನೆ ನಡೆಸಿದ ಹಲವು ರೈತ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

- Advertisement -

ನಗರದ ರಾಣಿ ಚೆನ್ನಮ್ಮ ವೃತ್ತದಲ್ಲಿ ಸೇರಿದ ರೈತ ಮುಖಂಡರು, ಕೇಂದ್ರ ರೈತ ವಿರೋಧಿ ಧೋರಣೆ ವಿರುದ್ಧ ಧಿಕ್ಕಾರ ಕೂಗಿದರು. ಇಬ್ಬರು ರೈತರು ಅರೆಬೆತ್ತಲೆಯಾಗಿ ಉರುಳು ಸೇವೆ ಮಾಡಿದರು. ಮೆರವಣಿಗೆಯಲ್ಲಿ ತೆರಳಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಧರಣಿ ನಡೆಸಿದರು.

ವಿವಾದಿತ ಕಾಯ್ದೆಗಳ ಬಗ್ಗೆ ರೈತರಿಗೆ ಹಲವು ಅನುಮಾನ ಮತ್ತು ಗೊಂದಲಗಳಿವೆ. ಅವುಗಳನ್ನು ಅಮಿತ್ ಶಾ ಇಲ್ಲಿಗೆ ಬಂದು, ನಮ್ಮೊಂದಿಗೆ ಸಂವಾದ ನಡೆಸಿ ಬಗೆಹರಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ.

- Advertisement -

ಪ್ರತಿಭಟನೆ ವೇಳೆ ಕೆಲ ರೈತರು ‘ಗೋ ಬ್ಯಾಕ್ ಅಮಿತ್ ಶಾ’ ಎಂಬ ಘೋಷಣೆ ಕೂಗಲಾಗಿದೆ. ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಪೊಲೀಸರು ರೈತ ಮುಖಂಡರಾದ ಚೂನಪ್ಪ ಪೂಜಾರಿ, ಜಯಶ್ರೀ ಗುರಣ್ಣವರ, ರಾಘವೇಂದ್ರ ನಾಯ್ಕ, ಪ್ರಕಾಶ್ ನಾಯ್ಕ ಮೊದಲಾದವರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಗಳು ತಿಳಿಸಿವೆ.  

Join Whatsapp