ರಾಜಭವನ ಚಲೋ | ಮೋದಿ ಸರಕಾರದ ಕೃಷಿ ಕಾನೂನು ವಿರೋಧಿಸಿ ಬೆಂಗಳೂರಿನಲ್ಲಿ ಮೊಳಗಿದೆ ರೈತರ ರಣಕಹಳೆ; ಕಾಂಗ್ರೆಸ್ ಪ್ರತಿಭಟನೆ

Prasthutha|

ಬೆಂಗಳೂರು : ಕೇಂದ್ರದ ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ಇಂದು ರಾಜ್ಯ ಕಾಂಗ್ರೆಸ್ ನೇತೃತ್ವದಲ್ಲಿ ರೈತರ ಬೃಹತ್ ರಾಜಭವನ ಚಲೋ ಚಳವಳಿ ಆರಂಭಗೊಂಡಿದೆ. ಸಾವಿರಾರು ಕಾಂಗ್ರೆಸ್ ಮುಖಂಡರು, ರೈತರು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ಸಾಗುತ್ತಿದೆ.

- Advertisement -

ರಾಜ್ಯದ ಮೂಲೆ ಮೂಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ರೈತರು ಬೆಂಗಳೂರಿಗೆ ಆಗಮಿಸಿದ್ದಾರೆ. ಟ್ರಾಕ್ಟರ್ ಗಳ ಮೂಲಕವೂ ರೈತರು ಪ್ರತಿಭಟನೆಯಲ್ಲಿ ಭಾಗಿಯಾಗುತ್ತಿದ್ದಾರೆ.

ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ ಮೂಲಕವಾಗಿ ರೈತರು ರಾಜಭವನದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದಾರೆ. ಪ್ರತಿಭಟನೆಯ ಹಿನ್ನೆಲೆಯಲ್ಲಿ ನಗರದಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ.

- Advertisement -

ಈಗಾಗಲೇ ಫ್ರೀಡಂ ಪಾರ್ಕ್, ಮೌರ್ಯ ವೃತ್ತ, ಮೈಸೂರು ರಸ್ತೆ ಸೇರಿದಂತೆ ವಿವಿಧೆಡೆ ಟ್ರಾಫಿಕ್ ಜಾಮ್ ನಿಂದ ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ.

ಪೊಲೀಸ್ ಬಿಗಿಬಂದೋಬಸ್ತ್ ನಡೆದಿದೆ. ರೈತರು ಈ ದೇಶದ ಶಕ್ತಿ ಅವರನ್ನು ಉಳಿಸಿ, ಬೆಳೆಸಬೇಕಾದದ್ದು ನಮ್ಮ ಕರ್ತವ್ಯ. ಪೊಲೀಸರ ಮೂಲಕ ನಮ್ಮನ್ನು ಬೆದರಿಸುವ ಕೆಲಸ ನಡೆದಿದೆ. ಯಾರಿಗೂ ಹೆದರುವ ಅಗತ್ಯವಿಲ್ಲ. ರಾಜಭವನ ಚಲೋ ತಡೆಯುವ ಯತ್ನ ನಡೆದರೆ ಪ್ರತಿಭಟನಾ ನಿರತ ರೈತರು ಅದೇ ಸ್ಥಳದಲ್ಲಿ ಕುಳಿತು ಹೋರಾಟ ನಡೆಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕರೆ ನೀಡಿದ್ದಾರೆ.

Join Whatsapp