January 20, 2021

ರೈತರು ಪೊಲೀಸ್ ವಶಕ್ಕೆ | ರಾಜಭವನದತ್ತ ಕಾಂಗ್ರೆಸ್ ನಾಯಕರ ಯಾತ್ರೆ

ಬೆಂಗಳೂರು : ಕೇಂದ್ರ ಸರಕಾರದ ನೂತನ ಕೃಷಿ ನೀತಿಗಳನ್ನು ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಬೆಂಬಲಿಸಿ, ನಗರದಲ್ಲಿ ‘ರಾಜಭವನ ಚಲೋ’ ಹಮ್ಮಿಕೊಂಡಿರುವ ರೈತರನ್ನು ಪೊಲೀಸರು ವಶಕ್ಕೆ ಪಡೆಯಲಾರಂಭಿಸಿದ್ದಾರೆ.

ಕಾಂಗ್ರೆಸ್ ನಾಯಕರ ನೇತೃತ್ವದಲ್ಲಿ ಫ್ರೀಡಂ ಪಾರ್ಕ್ ನಲ್ಲಿ ನಡೆದ ಸಮಾವೇಶದ ಬಳಿಕ ರಾಜಭವನದತ್ತ ತೆರಳಿದ ರೈತರಲ್ಲಿ ಕೆಲವರನ್ನು ಪೊಲೀಸರು ವಶಕ್ಕೆ ಪಡೆಯಲಾರಂಭಿಸಿದ್ದಾರೆ. ಪ್ರಮುಖ ನಾಯಕರು ತೆರೆದ ವಾಹನಗಳಲ್ಲಿ ಜಾಥಾ ತೆರಳಿದ್ದಾರೆ. ಆದರೆ, ಇನ್ನೊಂದೆಡೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ರೈತರನ್ನು ಪೊಲೀಸರು ವಶಕ್ಕೆ ಪಡೆಯಲಾರಂಭಿಸಿದ್ದಾರೆ.

ಕಾಂಗ್ರೆಸ್ ನಾಯಕರಾದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ, ಪರಮೇಶ್ವರ್ ನೇತೃತ್ವದಲ್ಲಿ ಬೃಹತ್ ಪಾದಯಾತ್ರೆಯನ್ನು ಕೈಗೊಳ್ಳ;ಲಾಗಿದೆ.      

ಶೋಷಿತ, ದಮನಿತ ಸಮುದಾಯಗಳ ಧ್ವನಿಯಾಗಿರುವ ಮತ್ತು ಜನಸಾಮಾನ್ಯರ ಸಮಸ್ಯೆಗಳಿಗೆ ಸದಾ ಮಿಡಿಯುವ ಪ್ರಸ್ತುತ ಪಾಕ್ಷಿಕಕ್ಕೆ ಚಂದಾದಾರಾಗಿರಿ. ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ