ರೈತ ಹೋರಾಟ ಬೆಂಬಲಿಸಿ ನಾಳೆ ಸಂಸತ್ತಿನಲ್ಲಿ ರಾಷ್ಟ್ರಪತಿ ಭಾಷಣಕ್ಕೆ 16 ಪಕ್ಷಗಳ ಬಹಿಷ್ಕಾರ

Prasthutha|

ನವದೆಹಲಿ : ಕೇಂದ್ರದ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ, ನಾಳೆ(ಶುಕ್ರವಾರ) ಸಂಸತ್ತಿನ ಉಭಯ ಸದನಗಳನ್ನುದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮಾಡಲಿರುವ ಭಾಷಣಕ್ಕೆ ಬಹಿಷ್ಕಾರ ಹಾಕಲು 16 ಪಕ್ಷಗಳು ನಿರ್ಧರಿಸಿವೆ. ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ, ಕಾಂಗ್ರೆಸ್ ನೇತೃತ್ವದಲ್ಲಿ 16 ಪಕ್ಷಗಳು ರಾಷ್ಟ್ರಪತಿ ಭಾಷಣವನ್ನು ಬಹಿಷ್ಕರಿಸಲು ನಿರ್ಧರಿಸಿವೆ ಎಂದು ಕಾಂಗ್ರೆಸ್ ಮುಖಂಡ ಗುಲಾಮ್ ನಬಿ ಆಝಾದ್ ಹೇಳಿದ್ದಾರೆ.

- Advertisement -

ಗಣರಾಜ್ಯೋತ್ಸವ ದಿನ ದೆಹಲಿಯಲ್ಲಿ ನಡೆದ ಹಿಂಸಾಚಾರದಲ್ಲಿ ಕೇಂದ್ರ ಸರಕಾರದ ಪಾತ್ರದ ಕುರಿತು ತನಿಖೆ ನಡೆಸುವಂತೆ 16 ವಿರೋಧ ಪಕ್ಷಗಳು ಒತ್ತಾಯಿಸುತ್ತಿವೆ ಎಂದು ಅವರು ತಿಳಿಸಿದ್ದಾರೆ.

ಕಾಂಗ್ರೆಸ್, ಎನ್ ಸಿಪಿ, ಜಮ್ಮು-ಕಾಶ್ಮೀರ ನ್ಯಾಶನಲ್ ಕಾನ್ಫರೆನ್ಸ್, ಡಿಎಂಕೆ, ಎಐಟಿಸಿ, ಶಿವಸೇನೆ, ಸಮಾಜವಾದಿ ಪಕ್ಷ, ಆರ್ ಜೆಡಿ, ಸಿಪಿಎಂ, ಸಿಪಿಐ, ಐಯುಎಂಎಲ್, ಆರ್ ಎಸ್ ಪಿ, ಪಿಡಿಪಿ, ಎಂಡಿಎಂಕೆ, ಕೇರಳ ಕಾಂಗ್ರೆಸ್ (ಎಂ), ಎಐಯುಡಿಎಫ್ ಸೇರಿದಂತೆ 16 ಪಕ್ಷಗಳು ರಾಷ್ಟ್ರಪತಿ ಭಾಷಣವನ್ನು ಬಹಿಷ್ಕರಿಸಲಿವೆ.

Join Whatsapp