ಪತ್ರಕರ್ತರ ವಿರುದ್ಧ ದೇಶದ್ರೋಹ ಪ್ರಕರಣ : ಸಂಪಾದಕರ ಒಕ್ಕೂಟ ಖಂಡನೆ

Prasthutha|

ನವದೆಹಲಿ : ರೈತರ ಟ್ರಾಕ್ಟರ್ ಪರೇಡ್ ಗೆ ಸಂಬಂಧಿಸಿದ ವರದಿಯ ವೇಳೆ ಆದ ತಪ್ಪನ್ನು ಉಲ್ಲೇಖಿಸಿ, ಪತ್ರಕರ್ತರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿರುವುದಕ್ಕೆ ಸಂಪಾದಕರ ಒಕ್ಕೂಟ ಆಕ್ರೋಶ ವ್ಯಕ್ತಪಡಿಸಿದೆ.

- Advertisement -

ಪತ್ರಕರ್ತರ ವಿರುದ್ಧ ಈ ರೀತಿಯ ಕ್ರಮ ಕೈಗೊಳ್ಳುವ ಮೂಲಕ ಸರಕಾರ ಪತ್ರಕರ್ತರಿಗೆ ಬೆದರಿಕೆಯೊಡ್ಡಿ, ಕಿರುಕುಳಕ್ಕೆ ಗುರಿಪಡಿಸುವ ಉದ್ದೇಶ ಹೊಂದಿದೆ ಎಂದು ಒಕ್ಕೂಟ ಅಭಿಪ್ರಾಯ ಪಟ್ಟಿದೆ. ಪತ್ರಕರ್ತರ ವಿರುದ್ಧ ದಾಖಲಾದ ಎಫ್ ಐಆರ್ ರದ್ದುಪಡಿಸಬೇಕು ಎಂದು ಒಕ್ಕೂಟ ಒತ್ತಾಯಿಸಿದೆ.

ಹಿರಿಯ ಪತ್ರಕರ್ತ ರಾಜ್ ದೀಪ್ ಸರ್ದೇಸಾಯಿ ಸಹಿತ ಆರು ಮಂದಿ ಪತ್ರಕರ್ತರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಿದೆ. ರೈತರ ಪ್ರತಿಭಟನೆ ವೇಳೆ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಆತ ಪೊಲೀಸ್ ಗುಂಡಿಗೆ ಬಲಿಯಾಗಿದ್ದಾನೆ ಎಂದು ತಪ್ಪು ವರದಿ ಪ್ರಕಟಿಸಿದ ಕಾರಣಕ್ಕಾಗಿ ಇವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

Join Whatsapp