ನವದೆಹಲಿ : ರೈತರ ಪ್ರತಿಭಟನೆ ಹತ್ತಿಕ್ಕಲು ಕೇಂದ್ರ ಸರಕಾರ ನಡೆಸುತ್ತಿರುವ ಪ್ರಯತ್ನಗಳಿಗೆ ಈಗಾಗಲೇ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ, ರೈತರನ್ನು ತಡೆಯಲು ಹೆದ್ದಾರಿಗಳಲ್ಲಿ ಬ್ಯಾರಿಕೇಡ್, ಮುಳ್ಳಿ ತಂತಿ, ಕಾಂಕ್ರೀಟ್ ಸ್ಲಾಬ್ ಮತ್ತು ಕಬ್ಬಿಣದ ಮೊಳೆಗಳನ್ನು ರಸ್ತೆಗೆ ನೆಟ್ಟ ಬಗ್ಗೆಯೂ ಸೋಶಿಯಲ್ ಮೀಡಿಯಾಗಳಲ್ಲಿ ಆಕ್ರೋಶದ ನುಡಿಗಳು ಕೇಳಿಬರುತ್ತಿವೆ.
ಈ ನಡುವೆ, ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಬಗ್ಗೆ ಟ್ವೀಟ್ ಮಾಡಿ, “ಸೇತುವೆ ಕಟ್ಟಿ, ಗೋಡೆಗಳನ್ನಲ್ಲ” ಎಂದಿದ್ದಾರೆ.
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಕೂಡ ಸರಕಾರದ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಪ್ರಧಾನಿಯವರೇ, ನಮ್ಮದೇ ಕೃಷಿಕರ ವಿರುದ್ಧ ಯುದ್ಧವೇ?” ಎಂದು ಪ್ರಶ್ನಿಸಿ, ರೈತರು ಪ್ರತಿಭಟನೆ ನಡೆಸುತ್ತಿರುವ ದೆಹಲಿ ಗಡಿಗಳಲ್ಲಿ ಪೊಲೀಸರು ಹಾಕಿರುವ ತಡೆಬೇಲಿಯ ವೀಡಿಯೊ ಟ್ವೀಟ್ ಮಾಡಿದ್ದಾರೆ.