ರಾಜ್ಯದಲ್ಲೂ ಇನ್ನಷ್ಟು ತೀವ್ರಗೊಳ್ಳಲಿದೆ ರೈತರ ಹೋರಾಟ | ನಾಳೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧಾರ

Prasthutha|

ಬೆಂಗಳೂರು : ರಾಜ್ಯದಲ್ಲೂ ನಾಳೆಯಿಂದ ರೈತರ ಪ್ರತಿಭಟನೆ ತೀವ್ರಗೊಳ್ಳಲಿದೆ. ದೇಶಾದ್ಯಂತ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲವಾಗಿ, ಪ್ರಧಾನಿ ನರೇಂದ್ರ ಮೋದಿ ಸರಕಾರದ ನೂತನ ಕೃಷಿ ಕಾನೂನು ಹಿಂದಕ್ಕೆ ಪಡೆಯುವಂತೆ ಒತ್ತಾಯಿಸಿ, ನಾಳೆ ರೈತರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.

- Advertisement -

ನಾಳೆಯಿಂದ ನಮ್ಮ ರೈತರ ಹೋರಾಟ ಮತ್ತಷ್ಟು ತೀವ್ರಗೊಳ್ಳಲಿದೆ. ಇಂದಿನ ಭಾರತ ಬಂದ್ ಬಳಿಕ ನಾಳೆಯೂ ನಮ್ಮ ಪ್ರತಿಭಟನೆ ಮುಂದುವರಿಯಲಿದೆ. ಕೇಂದ್ರ ಸರಕಾರದ ರೈತ ವಿರೋಧಿ ಮಸೂದೆಗಳ ವಾಪಾಸ್ ವಿರುದ್ಧ ನಮ್ಮ ಹೋರಾಟವಾಗಿದೆ ಎಂದು ರೈತ ಸಂಘದ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.

ನಾಳೆ ವಿಧಾನಸೌಧ ಮುತ್ತಿಗೆ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಈ ಮುತ್ತಿಗೆ ಪ್ರತಿಭಟನೆಯಲ್ಲಿ 10,000ಕ್ಕೂ ಹೆಚ್ಚು ರೈತರು ಭಾಗವಹಿಸಲಿದ್ದಾರೆ. ಈ ಮೂಲಕ ರೈತ ವಿರೋಧಿ ಮಸೂದೆಗಳ ವಿರುದ್ಧ ತೀವ್ರವಾಗಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.  



Join Whatsapp