ಫಾರೂಕ್ ಅಬ್ದುಲ್ಲಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ: ಉಮರ್ ಅಬ್ದುಲ್ಲಾ

Prasthutha|

ಶ್ರೀನಗರ: ಮಾಜಿ ಮುಖ್ಯಮಂತ್ರಿ ಹಾಗೂ ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ, ಆದರೆ ಮುಂಬರುವ ಪಕ್ಷದ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸದಿರುವ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಸ್ಪಷ್ಟನೆ ನೀಡಿದ್ದಾರೆ.

- Advertisement -

ಈ ಕುರಿತು ಮಾತನಾಡಿದ ಅವರು, ಡಾ. ಫಾರೂಕ್ ಅಬ್ದುಲ್ಲಾ ಅವರು ಜೆಕೆಎನ್’ಸಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ, ಆದರೆ ಮುಂಬರುವ ಪಕ್ಷದ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸದಿರುವ ಬಗ್ಗೆ ಮಾತ್ರ ಅವರು ಪಕ್ಷಕ್ಕೆ ಮಾಹಿತಿ ನೀಡಿದ್ದಾರೆ ಎಂದು ಹೇಳಿದರು.

ಈ ವರ್ಷದ ಡಿಸೆಂಬರ್’ನಲ್ಲಿ ಈ ಚುನಾವಣೆಗಳು ಹೇಗಾದರೂ ನಡೆಯಬೇಕಿತ್ತು. ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಅಬ್ದುಲ್ಲಾ ಅವರು ಅಧ್ಯಕ್ಷರಾಗಿ ಮುಂದುವರಿಯುತ್ತಾರೆ. ಅಧ್ಯಕ್ಷ ಸ್ಥಾನಕ್ಕೆ ತಮ್ಮ ನಾಮಪತ್ರಗಳನ್ನು ಸಲ್ಲಿಸುವುದನ್ನು ಗಂಭೀರವಾಗಿ ಪರಿಗಣಿಸುವಂತೆ ನಾನು ನನ್ನ ಎಲ್ಲಾ ಸಹೋದ್ಯೋಗಿಗಳಿಗೆ ಮನವಿ ಮಾಡುತ್ತೇನೆ ಎಂದು ಉಮರ್ ಅಬ್ದುಲ್ಲಾ ಹೇಳಿದ್ದಾರೆ.



Join Whatsapp