Home ಟಾಪ್ ಸುದ್ದಿಗಳು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಸ್ಥಾನಕ್ಕೆ ಫಾರೂಕ್ ಅಬ್ದುಲ್ಲಾ ರಾಜೀನಾಮೆ

ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಸ್ಥಾನಕ್ಕೆ ಫಾರೂಕ್ ಅಬ್ದುಲ್ಲಾ ರಾಜೀನಾಮೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರು ಶುಕ್ರವಾರ ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಫಾರೂಕ್ ಅಬ್ದುಲ್ಲಾ ಅವರ ಪುತ್ರ, ಮಾಜಿ ಮುಖ್ಯಮಂತ್ರಿ, ಪ್ರಸ್ತುತ ಪಕ್ಷದ ಉಪಾಧ್ಯಕ್ಷರಾಗಿರುವ ಉಮರ್ ಅವರು ಹೊಸ ಅಧ್ಯಕ್ಷರಾಗುವ ಸಾಧ್ಯತೆಯಿದೆ. ಶ್ರೀನಗರದಲ್ಲಿ ತಮ್ಮ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಹಿರಿಯ ಅಬ್ದುಲ್ಲಾ, “ನನ್ನ ಆರೋಗ್ಯವು ಈಗ ಪಕ್ಷವನ್ನು ಮುನ್ನಡೆಸಲು ನನಗೆ ಅನುಮತಿಸುವುದಿಲ್ಲ” ಎಂದು ಹೇಳಿದರು.

ಸಂಸತ್ತಿನಲ್ಲಿ ಶ್ರೀನಗರ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ 85 ವರ್ಷದ ಅವರು ಶ್ರೀನಗರದಲ್ಲಿ ನಡೆದ ಎನ್ಸಿ ನಾಯಕರ ಸಭೆಯಲ್ಲಿ ಪಕ್ಷದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವುದಾಗಿ ಘೋಷಿಸಿದ್ದಾರೆ.

Join Whatsapp
Exit mobile version