ಮುಸ್ಲಿಂ ಸಮುದಾಯಕ್ಕೆ 2ಬಿ ಮೀಸಲಾತಿಯನ್ನು ಮರುಸ್ಥಾಪಿಸುವಂತೆ ಫಾರೂಕ್ ಜುನೈದಿ ಪಾದಯಾತ್ರೆ

Prasthutha|

ಬೆಂಗಳೂರು: ಮುಸ್ಲಿಂ ಸಮುದಾಯಕ್ಕೆ 2ಬಿ ಮೀಸಲಾತಿಯನ್ನು ಮರುಸ್ಥಾಪಿಸುವಂತೆ ಕೋರಿ ಸಾಫ್ಟ್‌ವೇರ್ ಟೆಕ್ಕಿ 26 ವರ್ಷದ ಫಾರೂಕ್ ಜುನೈದಿ ಕೋಲಾರದಿಂದ ಬೆಂಗಳೂರಿಗೆ ಪಾದಯಾತ್ರೆ ಕೈಗೊಂಡಿದ್ದಾರೆ.

- Advertisement -

ನಿಕಟಪೂರ್ವ, ಬಸವರಾಜ ಬೊಮ್ಮಾಯಿ ನೇತೃತ್ವದ ಹಿಂದಿನ ಬಿಜೆಪಿ ಸರ್ಕಾರ ಮುಸ್ಲಿಮರ ಮೀಸಲಾತಿಯನ್ನು ರದ್ದುಗೊಳಿಸಿತ್ತು. ಇದರಿಂದಾಗಿ ಸಮುದಾಯದ ಅನೇಕ ವಿದ್ಯಾರ್ಥಿಗಳು ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಮತ್ತು ಮೆರಿಟ್ ಆಧಾರಿತ ವಿದ್ಯಾರ್ಥಿವೇತನದಿಂದ ವಂಚಿತರಾಗಿದ್ದಾರೆ ಎಂದು ಜುನೈದಿ ಹೇಳಿದ್ದಾರೆ.

ಸಾಲ ಪಡೆದು ವಿದೇಶದಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳ ಮೇಲೂ ಇದು ಪರಿಣಾಮ ಬೀರಿದ್ದು, ದೀರ್ಘಾವಧಿಯಲ್ಲಿ ಸಮುದಾಯ ಸಂಕಷ್ಟಕ್ಕೆ ಸಿಲುಕಲಿದೆ. ಪಾದಯಾತ್ರೆ ಕೈಗೊಳ್ಳುವಂತೆ ಇದೇ ನನ್ನನು ಪ್ರೇರೇಪಿಸಿತ್ತು ಎಂದು ಜುನೈದಿ ಹೇಳಿದ್ದಾರೆ.

- Advertisement -

ಜುನೈದಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಎಂಜಿನಿಯರ್‌ಗಳ ಸಂಘದ ಅಧ್ಯಕ್ಷರೂ ಆಗಿದ್ದಾರೆ. 2ಬಿ ವರ್ಗದಡಿ ಮುಸ್ಲಿಮರಿಗೆ ಅಲ್ಪಸಂಖ್ಯಾತ ಮೀಸಲಾತಿಯನ್ನು ಮರುಸ್ಥಾಪಿಸಲು ನಾನು ಫೆಬ್ರವರಿ 24ರಂದು ಕೋಲಾರದಿಂದ ಬೆಂಗಳೂರಿಗೆ ಮತ್ತು ಜಾಗೃತಿ ಮೂಡಿಸಲು ಪಾದಯಾತ್ರೆಯನ್ನು ಪ್ರಾರಂಭಿಸಿದೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹಮದ್ ಖಾನ್ ಮತ್ತು ಸಿಎಂ ರಾಜಕೀಯ ಕಾರ್ಯದರ್ಶಿ ನಝೀರ್ ಅಹಮದ್ ಅವರನ್ನು ಭೇಟಿ ಮಾಡಿ ತಮ್ಮಪ್ರಸ್ಥಾಪನೆಯನ್ನು ನೀಡಲಿದ್ದೇನೆಂದು ತಿಳಿಸಿದ್ದಾರೆ.



Join Whatsapp