ಸಂಪಾಜೆಯಲ್ಲಿ ಕಾರು -ಬಸ್ ನಡುವೆ ಭೀಕರ ಅಪಘಾತ; ಆರು ಮಂದಿ ಮೃತ್ಯು

Prasthutha|

ಸುಳ್ಯ: ಇಲ್ಲಿನ ಸಂಪಾಜೆ ಬಳಿ ಬಸ್ಸು ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಹಿಳೆಯರು, ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಆರು ಮಂದಿ ಮೃತಪಟ್ಟಿರುವ ದಾರುಣ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.

- Advertisement -


ಕಾರು ಮತ್ತು ಬಸ್ ನಡುವೆ ಕೊಡಗು ಸಂಪಾಜೆಯ ಪೆಟ್ರೋಲ್ ಪಂಪ್ ಬಳಿ ಅಪಘಾತ ನಡೆದಿದ್ದು ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟರೆ ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.


ಗಾಯಾಳುಗಳನ್ನು ಸುಳ್ಯದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಪಘಾತದಲ್ಲಿ ಕಾರು ನಜ್ಜುಗುಜ್ಜಾಗಿದೆ.

- Advertisement -


ಕಾರಿನಲ್ಲಿದ್ದವರೆಲ್ಲ ಮೂಲತಃ ಮಂಡ್ಯ ಜಿಲ್ಲೆಯವರು ಎಂದು ತಿಳಿದುಬಂದಿದೆ. ಕಾರು ಮಡಿಕೇರಿಯಿಂದ ಮಂಗಳೂರು ಕಡೆಗೆ ಹಾಗೂ ಬಸ್ಸು ಮಂಗಳೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ಕಾರಿನಲ್ಲಿ ಚಾಲಕ ಸೇರಿದಂತೆ ಒಟ್ಟು ಎಂಟು ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ಸುಳ್ಯ ಕೆವಿಜಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Join Whatsapp