ಲಾರಿ-ಆಟೋಗಳ ನಡುವೆ ಭೀಕರ ಅಪಘಾತ; 7 ಮಂದಿ ಸಾವು

Prasthutha|

ಹೊಸಪೇಟೆ: ಎರಡು ಆಟೋ ಮತ್ತು ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ಪ್ರಯಾಣಿಕರು ಮೃತಪಟ್ಟಿರುವ ಘಟನೆ ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಬ್ರೀಡ್ಜ್ ಬಳಿ ನಡೆದಿದೆ.

- Advertisement -


ಅಪಘಾತದಲ್ಲಿ ವೇಗವಾಗಿ ಬಂದ ಲಾರಿ ಎರಡು ಆಟೋಗಳಿಗೆ ಡಿಕ್ಕಿ ಹೊಡೆದಿದ್ದು ಆಟೋದಲ್ಲಿದ್ದ 7 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇನ್ನು ಘಟನೆಯಲ್ಲಿ ಇಬ್ಬರು ಮಕ್ಕಳು ಗಾಯಗೊಂಡಿದ್ದು, ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳ್ಳಾರಿಯಿಂದ ತುಂಗಭದ್ರಾ ಡ್ಯಾಮ್ ಕಡೆಗೆ ಆಟೋ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಅಪಘಾತ ಬಳಿಕ ಲಾರಿಯನ್ನು ಬಿಟ್ಟು ಲಾರಿ ಚಾಲಕ ಪರಾರಿಯಾಗಿದ್ದಾನೆ.