ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ : ಸ್ಥಳದಲ್ಲೇ ಇಬ್ಬರು ಮೃತ್ಯು

Prasthutha|

ಶಿವಮೊಗ್ಗ: ಲಾರಿ ಕಾರಿಗೆ ಗುದ್ದಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗದ ಮಾಚೇನಹಳ್ಳಿ ಡೈರಿಯ ಬಳಿ ಜರುಗಿದೆ.

- Advertisement -

ಭದ್ರಾವತಿ ನಗರದ ಪೇಪರ್ ಟೌನ್ ನಿವಾಸಿಗಳಾಗಿರುವ ಷಣ್ಮುಖ ಮತ್ತು ರಾಮಚಂದ್ರ ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಶಿವಮೊಗ್ಗದಿಂದ ಭದ್ರಾವತಿ ಕಡೆಗೆ ಸಾಗುತ್ತಿದ್ದ ಲಾರಿಯ ಸ್ಟೇಯರಿಂಗ್ ತುಂಡಾಗಿ ಅಪಘಾತ ನಡೆದಿದೆ ಎನ್ನಲಾಗಿದೆ. ಡಿವೈಡರ್ ದಾಟಿ ಬಂದ ಲಾರಿ ಕಾರ್ ಗೆ ಢಿಕ್ಕಿ ಹೊಡೆದಿದೆ. ನಿಯಂತ್ರಣ ತಪ್ಪಿದ ಲಾರಿಯು ಕಾರಿಗೆ ಗುದ್ದಿದ ಪರಿಣಾಮ ಕಾರು ಸಂಪೂರ್ಣ ಜಖಂ ಆಗಿದೆ.

- Advertisement -

 ಭದ್ರಾವತಿಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp
Exit mobile version