ಉತ್ತರಪ್ರದೇಶ: ಮಹಿಳಾ ಕಾನ್ಸ್ಟೇಬಲ್ ಮೇಲೆ ಮಾರಣಾಂತಿಕ ಹಲ್ಲೆ

Prasthutha|

ಲಕ್ನೋ: ಮಹಿಳಾ ಕಾನ್ಸ್ಟೇಬಲ್ ಮೇಲೆ ಯುವಕನೊಬ್ಬ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಉತ್ತರಪ್ರದೇಶದ ಲಕ್ನೋದ ಅಲಿಗಂಜ್ ಪ್ರದೇಶದಲ್ಲಿ ನಡೆದಿದೆ.

- Advertisement -

ಗೇಲಿ ಮಾಡಿದ್ದನ್ನು ಪ್ರಶ್ನಿಸಿದ್ದ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಪ್ರಭಾತ್ ಕುಮಾರ್ ಎಂಬ ಯುವಕ ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಿ ಗಂಭೀರ ಗಾಯಗೊಳಿಸಿರುವುದಾಗಿ ವರದಿಯಾಗಿದೆ. ಹಲ್ಲೆ ನಡೆಸಿದ ಯುವಕನ ವಿರುದ್ಧ ಕೊಲೆ ಯತ್ನ, ಮಹಿಳೆಯನ್ನು ಅವಮಾನಿಸುವುದು ಮತ್ತು ಸರ್ಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಮಾಡಿದ ಪ್ರಕರಣ ದಾಖಲಿಸಲಾಗಿದೆ.

ವೀಡಿಯೋ ವೀಕ್ಷಿಸಿ…

- Advertisement -
https://twitter.com/JBreakingBajpai/status/1432006132088729602

ಯುವಕನು ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ವಿರುದ್ಧ ಅವಮಾನಕರ ರೀತಿಯಲ್ಲಿ ಮಾತನಾಡುತ್ತಿದ್ದ. ಇದನ್ನು ಪ್ರಶ್ನಿಸಿದ್ದ ಕಾನ್ಸ್ಟೇಬಲ್ ಮೇಲೆ ಯುವಕ ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಿ ಗಂಭೀರ ಗಾಯಗೊಳಿಸಿದ್ದಾನೆ. ಗಾಯಗೊಂಡ ಪೊಲೀಸ್ ಕಾನ್ಸ್ಟೇಬಲ್ ಅನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Join Whatsapp