ಮುಸ್ಲಿಮ್ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ, ದರೋಡೆ: ಸ್ಥಳದಲ್ಲಿ ಬಿಗುವಿನ ಪರಿಸ್ಥಿತಿ

Prasthutha: January 9, 2022

ಕೋಲಾರ: ದರ್ಗಾಕ್ಕೆ ಭೇಟಿ ನೀಡಿ ಹಿಂದಿರುಗುತ್ತಿದ್ದ ವೇಳೆ ಮುಸ್ಲಿಮ್ ಕುಟುಂಬವೊಂದರ ವಾಹನವನ್ನು ಅಡ್ಡಗಟ್ಟಿ ಬುರ್ಕಾ ತೆಗೆಯುವಂತೆ ಒತ್ತಾಯಿಸಿದ ಬಳಿಕ ವಾಹನದಲ್ಲಿದ್ದವರನ್ನು ಎಳೆದುಹಾಕಿ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಬಂಗಾರದ ಒಡವೆಗಳನ್ನು ದೋಚಿರುವ ಘಟನೆ ಕೋಲಾರದ ತೇರಹಳ್ಳಿಯಲ್ಲಿ ನಡೆದಿದೆ.

ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆ ರೋಮನಾ ಮಹಮದೀ ಎಂಬವರು ಕೋಲಾರ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.

ದುಷ್ಕರ್ಮಿಗಳಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿ ಗಾಯಗೊಂಡವರನ್ನು ತಜಮ್ಮುಲ್ ಶರೀಫ್, ಮಾಝ್ ಬೇಗ್, ಫಿರೋಝ್ ಪಾಶಾ, ಸಯೀದ್ ಪಾಶಾ, ಫಿರ್ದೌಸ್ ಪಾಶಾ, ಶೈಖ್ ಅನ್ವರ್ ಎಂಬ ಗುರುತಿಸಲಾಗಿದೆ. ಸದ್ಯ ಇವರನ್ನು ಎಸ್.ಎನ್.ಆರ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೋಲಾರದ ಮುಸ್ಲಿಮ್ ಕುಟುಂಬವೊಂದು ಬೆಟ್ಟದಲ್ಲಿರುವ ದರ್ಗಾಕ್ಕೆ ಭೇಟಿ ನೀಡಿ ಹಿಂದಿರುಗುತ್ತಿದ್ದ ವೇಳೆ ಅವರ ವಾಹನವನ್ನು ತಡೆದು ನಿಲ್ಲಿಸಿದ ದುಷ್ಕರ್ಮಿಗಳ ತಂಡವೊಂದು, ವಾಹನದಲ್ಲಿದ್ದವರ ಮೇಲೆ ಕ್ಷುಲ್ಲಕ ವಿಚಾರವನ್ನು ಮುಂದಿಟ್ಟು ಮಾರಕಾಯುಧದಿಂದ ಹಲ್ಲೆ ನಡೆಸಿದೆ ಎಂದು ಸಂತ್ರಸ್ತರು ಆರೋಪಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಉಭಯ ತಂಡಗಳ ವಿರುದ್ಧ ದೂರು – ಪ್ರತಿದೂರು ದಾಖಲಾಗಿದ್ದು, ಸ್ಥಳದಲ್ಲಿ ಬಿಗುವಿನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಪರಿಸ್ಥಿತಿಯ ನಿಯಂತ್ರಣಕ್ಕೆ ಕೇಂದ್ರ ಮೀಸಲು ಪಡೆಯನ್ನು ನಿಯೋಜಿಸಲಾಗಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!