Home ಕರಾವಳಿ ಮಂಗಳೂರು: ಮುಸ್ಲಿಮ್ ವ್ಯಕ್ತಿಗೆ ಮಾರಣಾಂತಿಕ ಹಲ್ಲೆ ಪ್ರಕರಣ| ಮೂವರು ಸಂಘಪರಿವಾರದ ಕಾರ್ಯಕರ್ತರ ಬಂಧನ

ಮಂಗಳೂರು: ಮುಸ್ಲಿಮ್ ವ್ಯಕ್ತಿಗೆ ಮಾರಣಾಂತಿಕ ಹಲ್ಲೆ ಪ್ರಕರಣ| ಮೂವರು ಸಂಘಪರಿವಾರದ ಕಾರ್ಯಕರ್ತರ ಬಂಧನ

ಮಂಗಳೂರು: ಬಂಟ್ವಾಳ ತಾಲೂಕಿನ ರಾಯಿ ಎಂಬಲ್ಲಿ ಬಸ್ಸಿನಿಂದ ಇಳಿಸಿ ಮುಸ್ಲಿಮ್ ವ್ಯಕ್ತಿಯೊಬ್ಬರಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಸಂಘಪರಿವಾರದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ರಾಯಿಯಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೊನಾವಣೆ ತಿಳಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಮನೋಹರ್, ಚೇತನ್, ಕಿಶೋರ್ ಎಂದು ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ ಐಪಿಸಿ ಕಲಂ 504,506,323,324,342,352 ಹಾಗೂ 34 IPC ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಮೇಸ್ತ್ರಿ ಕೆಲಸ ಮಾಡುತ್ತಿರುವ ಇಸಾಕ್ ಅವರು ಬುಧವಾರ ಬೆಳಗ್ಗೆ ಬಿ.ಸಿ.ರೋಡ್’ನಿಂದ ಮೂಡಬಿದ್ರೆಗೆ ಹೋಗುವಾಗ ಖಾಸಗಿ ಬಸ್ ಕಂಡೆಕ್ಟರ್ ಮತ್ತು ಸಂಘಪರಿವಾರದ ಕಾರ್ಯಕರ್ತರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ತೀವ್ರವಾಗಿ ಗಾಯಗೊಂಡಿರುವ ಇಸಾಕ್ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Join Whatsapp
Exit mobile version