ಜೆಡಿಎಸ್ ಪಂಚರತ್ನ ರಥದ ಚಾಲಕನ‌ ಮೇಲೆ ಮಾರಣಾಂತಿಕ‌ ಹಲ್ಲೆ

Prasthutha|

ಕೊಡಗು: ಜೆಡಿಎಸ್ ಪಂಚರತ್ನ ಯಾತ್ರೆಯ ರಥದ ಚಾಲಕನ‌ ಮೇಲೆ ಮಾರಣಾಂತಿಕ‌ ಹಲ್ಲೆ ನಡೆಸಿದ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ಸಮೀಪದ ಚಿಕ್ಕತ್ತೂರು ಗ್ರಾಮದಲ್ಲಿ ಶುಕ್ರವಾರ ಸಂಜೆ ನಡೆದಿದೆ.

ಚಿಕ್ಕತ್ತೂರಿನ ಅನು ಗಂಭೀರ ಹಲ್ಲೆಗೊಳಗಾದ ಚಾಲಕ.
ರಾಷ್ಟ್ರೀಯ ಪಕ್ಷದ ಇಬ್ಬರು ಕಾರ್ಯಕರ್ತರು ರಥ ಚಲಾಯಿಸದಂತೆ ತಾಕೀತು‌ ಮಾಡಿ ಬಾಟಲಿಯಿಂದ ತಲೆಗೆ ಹಲ್ಲೆ ನಡೆಸಿದ್ದಾರೆ ಎಂದು ಅನು ದೂರು ನೀಡಿದ್ದಾರೆ.

- Advertisement -

ಗಂಭೀರ ಗಾಯಗೊಂಡ ಚಾಲಕನನ್ನು ಮಡಿಕೇರಿಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -