Home ಟಾಪ್ ಸುದ್ದಿಗಳು ಇಬ್ಬರು ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆಗೈದ ತಂದೆ

ಇಬ್ಬರು ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆಗೈದ ತಂದೆ

ಕಲಬುರಗಿ: ತಂದೆಯೋರ್ವ ಮಕ್ಕಳಿಬ್ಬರನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ದಾರುಣ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ಕುಂಚಾವರಂನಲ್ಲಿ ನಡೆದಿದೆ.

ತಂದೆ ಹಣಮಂತ(36), ಮಗಳು ಅಕ್ಷತಾ(6), ಮಗ ಓಂಕಾರ(9) ಮೃತರು. ಮೃತ ಹಣಮಂತ ಹೈದರಾಬಾದ್​​ನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದು, ಜೂನ್ 16ರಂದು ಪತ್ನಿ ಬಿಟ್ಟು ಸ್ವಗ್ರಾಮಕ್ಕೆ ಬಂದಿದ್ದರು. ಕೌಟುಂಬಿಕ ಕಲಹ ಹಿನ್ನೆಲೆ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕುಂಚಾವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp
Exit mobile version