ಮಗನನ್ನು ಬೆಂಗಳೂರಿಗೆ ಬಸ್ ಹತ್ತಿಸಲು ತೆರಳುವಾಗ ಅಪಘಾತ: ತಂದೆ ಸಾವು, ಮಗ ಗಂಭೀರ

Prasthutha|

ಪುತ್ತೂರು: ಮಗನನ್ನು ಬೆಂಗಳೂರು ಬಸ್ ಹತ್ತಿಸಲು ತೆರಳುತ್ತಿದ್ದ ವೇಳೆ ಅಪಘಾತವಾಗಿ ತಂದೆ ಸಾವನ್ನಪ್ಪಿದ್ದು, ಮಗ ಗಂಭೀರ ಗಾಯಗೊಂಡ ಘಟನೆ ಪುತ್ತೂರಿನ ಕುಂಬ್ರದ ತಿಂಗಳಾಡಿ ರಸ್ತೆಯಲ್ಲಿ ಭಾನುವಾರ ರಾತ್ರಿ ನಡೆದಿದೆ.

- Advertisement -

ಪಂಜಿಗುಡ್ಡೆ ನಿವಾಸಿ ರಘುರಾಮ ಶೆಟ್ಟಿ ಮೃತ ದುರ್ದೈವಿ. ರಘುರಾಮ ಶೆಟ್ಟಿಯವರು ತನ್ನ ಮಗನನ್ನು ಬೆಂಗಳೂರು ಬಸ್ ಗೆ ಬಿಡಲು ಮನೆಯಿಂದ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ವಿರುದ್ಧ ಡಿಕ್ಕಿನಿಂದ ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಶೀನಪ್ಪ ಎಂಬವರು ಚಲಾಯಿಸುತ್ತಿದ್ದ ಮಾರುತಿ ಓಮ್ನಿ ನಡುವೆ ಸಮೀಪ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ರಘುನಾಥ ಶೆಟ್ಟಿ ಮತ್ತು ಸಹ ಸವಾರ ಅವರ ಪುತ್ರ ಗಂಭೀರ ಗಾಯಗೊಂಡಿದ್ದರು. ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ರಘುರಾಮ ಶೆಟ್ಟಿ ಅವರು ಮೃತಪಟ್ಟಿದ್ದಾರೆ. ರಘುರಾಮ ಶೆಟ್ಟಿಯವರ ಪುತ್ರನ ಕಾಲು ಮುರಿತಕ್ಕೊಳಗಾಗಿದ್ದು ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

Join Whatsapp