ಅಪ್ಪ ಮಗನಿಗೆ ಕರ್ನಾಟಕ ಬಿಜೆಪಿಯನ್ನು ಸಬ್‌ ರಿಜಿಸ್ಟ್ರಾರ್ ಮಾಡಿ ಕೊಟ್ಟಿದ್ದಾರೆ: ಯತ್ನಾಳ್

Prasthutha|

ವಿಜಯಪುರ ಜಿಲ್ಲೆ: ಬಿ.ಎಸ್.ಯಡಿಯೂರಪ್ಪ ಹಾಗೂ ಅವರ ಮಗನಿಗೆ ಕರ್ನಾಟಕ ಬಿಜೆಪಿಯನ್ನು ಬೆಂಗಳೂರಿನ ಸಬ್‌ರಿಜಿಸ್ಟ್ರಾರ್ ಆಫೀಸನಲ್ಲಿ ಬರೆದುಕೊಟ್ಟು ಬಿಟ್ಟಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಾಗ್ದಾಳಿ ಮುಂದುವರಿಸಿದ್ದಾರೆ.

- Advertisement -

ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಸಿದ್ಧೇಶ್ವರ ಔಷಧಿ ಮಳಿಗೆ ಉದ್ಘಾಟನಾ ಸಮಾರಂಭದ ಬಳಿಕ ಮಾಧ್ಯಮದವರು, ಬಿಜೆಪಿಯಲ್ಲಿ ನಿಮ್ಮನ್ನು ಕಡೆಗಣಿಸಲಾಗಿದೆಯೇ ಎಂದು ಪ್ರಶ್ನಿಸಿದಾಗ ಅವರು ಹೀಗೆ ಪ್ರತಿಕ್ರಿಯಿಸಿದರು.

ಅಲ್ಲದೆ, ವಿರೋಧ ಹಾಗೂ ಆಡಳಿತ ಪಕ್ಷದ ಜೋಡೆತ್ತುಗಳು ಅಡ್ಜಸ್ಟಮೆಂಟ್ ರಾಜಕಾರಣ ಮಾಡುತ್ತಿದ್ದಾರೆ. ನನ್ನದು ನೀನು ತೆಗೆಯಬೇಡ, ನಿನ್ನದು ನಾನು ತೆಗೆಯುವುದಿಲ್ಲ ಎಂದು ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ ಹಾಗೂ ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕುರಿತು ಟೀಕಿಸಿದರು.

Join Whatsapp