ತಂದೆಯಿಂದಲೇ ಇಬ್ಬರು ಮಕ್ಕಳ ಹತ್ಯೆ

Prasthutha|

ಮಂಡ್ಯ: ತಂದೆಯೇ ತನ್ನ ಇಬ್ಬರು ಮಕ್ಕಳನ್ನು ಹತ್ಯೆ ಮಾಡಿರುವ ಘಟನೆ ಶ್ರೀರಂಗಪಟ್ಟಣ ತಾಲ್ಲೂಕಿನ ಮರಳಾಗಾಲ ಗ್ರಾಮದ ತೋಟದ ಮನೆಯಲ್ಲಿ ಬುಧವಾರ ತಡರಾತ್ರಿ ನಡೆದಿದೆ.

- Advertisement -


ಕಲಬುರ್ಗಿ ಜಿಲ್ಲೆ, ಜೇವರ್ಗಿ ತಾಲ್ಲೂಕಿನ ಗಾಣಗಾಪುರದ ಶ್ರೀಕಾಂತ್ ಎಂಬಾತ ತನ್ನ ಮಕ್ಕಳಾದ ಅದಿತ್ಯ (4) ಮತ್ತು ಅಮೂಲ್ಯ (2) ಅವರ ಕತ್ತು ಸೀಳಿ ಹತ್ಯೆ ಮಾಡಿದ್ದಾನೆ.


ತನ್ನ ಪತ್ನಿ ಲಕ್ಷ್ಮಿ ಎಂಬಾಕೆಗೂ ಚೂರಿಯಿಂದ ಇರಿದು ಕಲ್ಲಿನಿಂದ ಜಜ್ಜಿದ್ದಾನೆ. ಲಕ್ಷ್ಮಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಶ್ರೀಕಾಂತ್ ನಾಪತ್ತೆಯಾಗಿದ್ದಾನೆ.
ಕೊಲೆಗೆ ಕಾರಣ ತಿಳಿದು ಬಂದಿಲ್ಲ.